ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣ: ಆರೋಪಿಗಳ ಬಂಧನ

ಶಿಡ್ಲಘಟ್ಟ : ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.

ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಸ್ಥಳೀಯರ ಬಳಿ ಬಟ್ಟೆ ಪಡೆದುಕೊಂಡು ಬಂದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ.

ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಎಸ್​ಪಿ ಕುಶಾಲ್ ಚೌಕ್ಸೆ ಆದೇಶದಂತೆ ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಸಹಕಾರದೊಂದಿಗೆ ಪಿಎಸ್ ಐ ಶ್ಯಾಮಲ ಹಾಗೂ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

15 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

16 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

17 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

17 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago