ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಆತ್ಮೀಯವಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮುನಿರಾಜು ಅವರಿಗೆ ಶುಭಾಶಯಗಳನ್ನು ತಿಳಿಸಿ, ಯೋಜನಾ ಪ್ರಾಧಿಕಾರದ ಮೂಲಕ ದೊಡ್ಡಬಳ್ಳಾಪುರ ತಾಲೂಕಿನ ಅಭಿವೃದ್ಧಿಗೆ ಪರಿಣಾಮಕಾರಿ ಕೊಡುಗೆ ನೀಡುವಂತಾಗಲಿ ಎಂದು ಹಾರೈಸಿದರು.

ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಹೆಚ್.ಎನ್. ಮಾತನಾಡಿ, ಎಸ್.ಡಿ. ಮುನಿರಾಜು ಅವರು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವುದು ಪಕ್ಷದ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಸಂತಸದ ವಿಚಾರವಾಗಿದೆ. ಅವರಿಗೆ ನೀಡಿರುವ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಶಿಸಿದರು.

ದೊಡ್ಡಬಳ್ಳಾಪುರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯೋಜಿತ ಅಭಿವೃದ್ಧಿ, ಮೂಲಸೌಕರ್ಯಗಳ ಸುಧಾರಣೆ, ರಸ್ತೆ, ಚರಂಡಿ, ಕುಡಿಯುವ ನೀರು, ಸಂಚಾರ ವ್ಯವಸ್ಥೆ ಸೇರಿದಂತೆ ವಿವಿಧ ಜನಪರ ವಿಚಾರಗಳಿಗೆ ಯೋಜನಾ ಪ್ರಾಧಿಕಾರದಲ್ಲಿ ಆದ್ಯತೆ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಮುನಿರಾಜು ಅವರು ಜನರ ಆಶಯಗಳಿಗೆ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಲಿ ಎಂದು ಅವರು ಹೇಳಿದರು.

ಹೊಸ ಜವಾಬ್ದಾರಿಯೊಂದಿಗೆ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಯುವ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿ. ಜನಪರ ಸೇವೆ ಮತ್ತು ಪಕ್ಷದ ಬಲವರ್ಧನೆ ಎರಡಕ್ಕೂ ಸಮಾನ ಆದ್ಯತೆ ನೀಡಿ ಮುನ್ನಡೆಯಲಿ ಎಂದು ನರಸಿಂಹಮೂರ್ತಿ ಹೆಚ್.ಎನ್. ಶುಭ ಹಾರೈಸಿದರು.

ಅಭಿನಂದನೆ ಸ್ವೀಕರಿಸಿದ ಎಸ್.ಡಿ. ಮುನಿರಾಜು ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಅಭಿವೃದ್ಧಿ ಪರವಾಗಿ ಕೆಲಸ ಮಾಡುವುದು ತಮ್ಮ ಪ್ರಮುಖ ಆದ್ಯತೆಯಾಗಿರಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಹರ್ಷ, ವೆಂಕಟೇಶ್, ಯುವ ಕಾಂಗ್ರೆಸ್ ಮುಖಂಡ ರಾಕೇಶ್ ಎನ್., ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರಾಕೇಶ್, ಯುವ ಮುಖಂಡ ವಿಶ್ವನಾಥ್ ಸೇರಿದಂತೆ ಹಲವು ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಎಸ್.ಡಿ. ಮುನಿರಾಜು ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

12 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

14 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

16 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

16 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

18 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

23 hours ago