ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……
ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……
ಆಧುನಿಕ ಸಮಾಜ ನೀಡಿರುವ ಎಲ್ಲಾ ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….
ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.
ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……
ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…