Categories: ಲೇಖನ

ರಂಜಾನ್ ಹಬ್ಬದ ಶುಭಾಶಯಗಳು…. ತಿಳಿವಳಿಕೆ ನಡವಳಿಕೆಯಾಗಬೇಕಾದ ಸಂದರ್ಭದಲ್ಲಿ…….

ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಈಗಾಗಲೇ ದೇವರು, ಧರ್ಮ, ಸಂವಿಧಾನ, ಪ್ರಜಾಪ್ರಭುತ್ವ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಖುರಾನ್, ಬೈಬಲ್, ಭಗವದ್ಗೀತೆ, ಭಾರತ, ಪಾಕಿಸ್ತಾನ, ಚೀನಾ, ಸೌಹಾರ್ಧತೆ, ಸಂಯಮ, ಸಮನ್ವಯ ಮುಂತಾದ ವಿಷಯಗಳ ಬಗ್ಗೆ  ಬಹುತೇಕ ಸಾಮಾನ್ಯ ಜನರಿಗೂ ತಲುಪುವಷ್ಟು ಚರ್ಚೆಗಳು ಅಭಿಪ್ರಾಯಗಳು ವ್ಯಕ್ತವಾಗಿದೆ……

ಈಗ ಉಳಿದಿರುವುದು ಮತ್ತು ಮುಂದುವರಿಯ ಬೇಕಾಗಿರುವುದು ನಮ್ಮ ತೀರ್ಮಾನ ಹಾಗೂ ತಿಳಿವಳಿಕೆ ಮತ್ತು ನಡವಳಿಕೆ. ಇದೇ ಅತ್ಯಂತ ಮಹತ್ವದ ವಿಷಯ……

ಆಧುನಿಕ ಸಮಾಜ ನೀಡಿರುವ ಎಲ್ಲಾ ‌ಸಿರಿ ಸಂಪತ್ತುಗಳು – ಪ್ರಜಾಪ್ರಭುತ್ವ ಎಂಬ ಅಪರಿಮಿತ ಸ್ವಾತಂತ್ರ್ಯ ಎಲ್ಲವನ್ನೂ ಉಪಯೋಗಿಸಿಕೊಂಡು ಇರುವಷ್ಟು ದಿನ‌ ಇರುವುದರಲ್ಲಿ ಒಂದಷ್ಟು ಸುಖ ಸಂತೋಷ ನೆಮ್ಮದಿಯಿಂದ ಬಾಳಬೇಕೆ ಅಥವಾ ಈಗಿನ ಸಂದರ್ಭಕ್ಕೆ ಅಪ್ರಸ್ತುತವಾದ ಅಥವಾ ಅಷ್ಟೇನೂ ಪ್ರಯೋಜನವಲ್ಲದ ಪುರಾತನ ಕಾಲದ ಯಾವುದೋ ನಂಬಿಕೆ, ಸಂಪ್ರದಾಯಗಳಿಗೆ ಕಟ್ಟುಬಿದ್ದು ಮನುಷ್ಯರೇ ಧರ್ಮದ, ಜಾತಿಯ ಆಧಾರದಲ್ಲಿ ಒಬ್ಬರಿಗೊಬ್ಬರು ದ್ವೇಷಿಸುತ್ತಾ, ಅಸೂಯೆಪಡುತ್ತಾ, ಮಚ್ಚು ಚಾಕು ಬಂದೂಕು ಬಾಂಬುಗಳಿಂದ ಕೊಂದುಕೊಳ್ಳುತ್ತಾ, ಸದಾ ಆತಂಕದಿಂದ ಬದುಕಬೇಕೇ ಎಂಬ ಆಯ್ಕೆಗಳು ಮಾತ್ರ….

ನಿಮಗೆ ಧರ್ಮ ಗ್ರಂಥಗಳು, ಹಿಜಾಬ್, ಕುಂಕುಮ, ನಾಮ, ಹಲಾಲ್ ಕಟ್, ಜಟ್ಕಾ ಕಟ್, ವಿಭೂತಿ, ಗಡ್ಡ, ಅಜಾನ್, ಹನುಮಾನ್ ಚಾಲೀಸು ಮುಂತಾದ ಆಚರಣೆಗಳು ಬೇಕೆ ಅಥವಾ ಮನುಷ್ಯ – ಮನುಷ್ಯತ್ವ  ಪ್ರೀತಿ, ಸಹಕಾರ, ಸಂಯಮ, ಸುಖಬದುಕು ಬೇಕೆ ಎಂಬ ಆಯ್ಕೆಗಳು ಮಾತ್ರ ನಮ್ಮ ಮುಂದಿವೆ.

ಇದನ್ನು ಯಾರೋ ಮುಲ್ಲಾಗಳು, ಪಾದ್ರಿಗಳು, ಮೌಲ್ವಿಗಳು, ಸ್ವಾಮೀಜಿಗಳು, ಮಠಾಧೀಶರು ಹೇಳಿಕೊಡಬೇಕಿಲ್ಲ ಅಥವಾ ನಿರ್ಧರಿಸ ಬೇಕಿಲ್ಲ. ನಮ್ಮ ನಮ್ಮ ಜ್ಞಾನದ ಮಿತಿಯಲ್ಲಿ, ನಾವೇ ನಿರ್ಧಾರ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವಿವೇಚನೆಗೆ ಬಿಡುತ್ತಾ……

ಮತ್ತೊಮ್ಮೆ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

5 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

6 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

12 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

24 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago