ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಿ ಜನರ ಜೀವ ಉಳಿಸಬೇಕು. ಅದೇರೀತಿ ಪಾರ್ಕಿಂಗ್ ವ್ಯವಸ್ಥೆ, ನವಜಾತ ಶಿಶು ತೀವ್ರ ನಿಗಾ ಘಟಕ, ಹೆಚ್ಚುವರಿ ಅಂಬುಲೆನ್ಸ್, ನುರಿತ ವೃದ್ಯರ ನೇಮಕ, ಎಂಆರ್ ಐ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ ಸುತ್ತಾ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ ಆಗ್ರಹಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಈ ಕುರಿತು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಅಸುನೀಗುತ್ತಿದ್ದಾರೆ. ಇದು ಇನ್ನು ಮುಂದೆ ಈ ರೀತಿ ಆಗಬಾರದು ಎಲ್ಲರ ಜೀವ ಅತ್ಯಮೂಲ್ಯ ರೋಗಿಗಳ ಪ್ರಾಣ ಉಳಿಸಬೇಕು ಎಂದರು.
ಈ ಹಿಂದೆ ಇದ್ದ ಡಾ.ಚೌಡಯ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರನ್ನ ನೇಮಿಸಬೇಕು, ಶಿಥಿಲಗೊಂಡಿರುವ ವೀಲ್ ಚೇರ್ ಗಳನ್ನು ಬದಲಿಸಬೇಕು, ಸ್ಕ್ಯಾನಿಂಗ್ ಮಾಡಲು ಹೆಚ್ಚುವರಿ ವೈದ್ಯರನ್ನ ನೇಮಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ರಾಜ್ಯ ಕಾರ್ಯದರ್ಶಿ ಎಂ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ನಗರ ಅಧ್ಯಕ್ಷ ಶ್ರೀನಿವಾಸ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…