ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿ ಹರಕೆ ತೀರಿಸಿದ ಶಿಯಾಮುಸ್ಲಿಮರು

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಹಸೇನ್‌ ಹುಸೇನ್‌ ಆಚರಣೆ ಭಾನುವಾರ ಶ್ರದ್ಧಾಭಕ್ತಿಗಳಿಂದ ನಡೆಯಿತು.

ದೊಡ್ಡಬಳ್ಳಾಪುರದಲ್ಲಿ ಭಾನುವಾರ ಶಿಯಾಮುಸ್ಲಿಮರು ಬ್ಲೇಡು ಮತ್ತಿತರೆ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿದರು.

ಧರ್ಮಗುರುಗಳು ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮೊಹರಂ ನಂತರದ 7 ದಿನಕ್ಕೆ ನಡೆಯಲಿರುವ ಈ ಆಚರಣೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಜನ ಶಿಯಾಮುಸ್ಲಿಮರು ಬ್ಲೇಡು, ಕತ್ತಿ ಮೊದಲಾದ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸಿದರು.

ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಅಂಜುಮನ್‌ ಎ ಹೈದರಿಯ ಸಂಘಟನೆ ನೇತೃತ್ವದಲ್ಲಿ ಮತ್ತು ಹುಸೇನ್‌ ಕಮಿಟಿ ಸಹಕಾರದಲ್ಲಿ ಮೊಹರಂ ನಡೆಸಲಾಗುತ್ತದೆ.

ಇಮಾಮ್‌ ಹುಸೇನ್‌ ತ್ಯಾಗ ಬಲಿದಾನಗಳನ್ನು ಇಂದು ಸ್ಮರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆ ನಡೆಯುವ ಪ್ರಮುಖ ಸ್ಥಳವಾಗಿದ್ದು, ಇದನ್ನು ಸುಮಾರು 268 ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದೆ.

ಇಮಾಮ್ ಹುಸೇನ್ ತ್ಯಾಗ ಬಲಿದಾನವನ್ನು ಇಂದು ಸ್ಮರಿಸಲಾಗುತ್ತದೆ. ಕರ್ನಾಟಕದಲ್ಲಿ ಈ ಆಚರಣೆ ನಡೆಯುವ ಪ್ರಮುಖ ಸ್ಥಳ ದೊಡ್ಡಬಳ್ಳಾಪುರವಾಗಿದೆ. ದೇಶದ ವಿವಿಧ ಮೂಲೆಗಳಿಂದ ಹಾಗೂ ವಿದೇಶಗಳಿಂದಲೂ ಸುಮಾರು 2 ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಸಮುದಾಯದವರು ಆಗಮಿಸಿ ರಕ್ತಸಿಕ್ತ ದೇಹವನ್ನು ಹುಸೇನ್ ದೇವರಿಗೆ ಅರ್ಪಿಸಿ ಹರಕೆ ತೀರಿಸಿದರು.

ಯಾವುದೇ ಅಹಿತಕರ ಘಟನೆ‌ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Ramesh Babu

Journalist

Recent Posts

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

14 minutes ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

11 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

16 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

18 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

19 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago