ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿವೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜರತ್ನ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ಬಿ.ಎನ್.ಮಂಜುನಾಥ್ ಹೇಳಿದರು.
ನಗರದ ಡಿ.ಕ್ರಾಸ್ ವೃತ್ತದ ಬಳಿ ಕರಾರವೇ ವತಿಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ವಿರೋಧಿಸಿ ನಡೆದ ರಸ್ತೆ ತಡೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಅನ್ಯಾಯ ಮಾಡುತ್ತಿದೆ. ಕರ್ನಾಟಕದ ಜನತೆಗೆ ಕುಡಿಯಲು ನೀರು ಇಲ್ಲದಿದ್ದರೂ ನಮಗೆ ನೀರು ಕೊಡಿ ಎಂದು ತಮಿಳುನಾಡು ಸರ್ಕಾರವು ಉದ್ಧಟತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ರಾಜಕಾರಣಿಗಳು ಸಹ ವೋಟ್ ಬ್ಯಾಂಕ್ ಗಾಗಿ ತಮಿಳುನಾಡಿಗೆ ಕಾವೇರಿ ನೀರನ್ನ ಬಿಡಲಾಗುತ್ತಿದೆ. ಇದರಿಂದ ಮಂಡ್ಯ, ಮೈಸೂರು ಭಾಗದ ರೈತರ ವ್ಯವಸಾಯಕ್ಕೆ ಹಾಗೂ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಿ.ಜಿ.ಬಾಬು, ಪ್ರಧಾನ ಕಾರ್ಯದರ್ಶಿ ಆರ್.ಮೋಹನ್, ರಾಜ್ಯ ಉಪಾಧ್ಯಕ್ಷ ಸಿ.ಜಿ.ಮಂಜುನಾಥ್, ಸಂಘಟನೆ ಮುಖಂಡರಾದ ಮುನಿರಾಜು, ವರದರಾಜು, ಕೃಷ್ಣಗೌಡ, ರಾಮಾಂಜಿನಪ್ಪ, ರಾಘವೇಂದ್ರ, ಸುನಿಲ್ ಗೌಡ, ಮಂಜುನಾಥ್,ಹೆಚ್ ಪದ್ಮ, ಚಂದನ್, ಅನಿಲ್ ಗೌಡ, ಗಂಗಾಧರ್, ಭಾನು ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…