
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ ಬಳಿ ನಡೆದಿದೆ…
ಪಿಕಪ್ ವಾಹನ, ಆಟೋ ರಸ್ತೆಯಲ್ಲೇ ಪಲ್ಟಿ ಹೊಡೆದಿದ್ದು, ಬೈಕ್ ನುಜ್ಜುಗುಜ್ಜಾಗಿದೆ..

ಅಪಘಾತ ಹಿನ್ನೆಲೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ಸಂಚಾರ ದಟ್ಟಣೆ ನಿಯಂತ್ರಣ ಮಾಡುತ್ತಿದ್ದಾರೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ…

ಸದ್ಯ ಮೃತ ಹೆಸರು, ವಯಸ್ಸು, ವಿಳಾಸ ತಿಳಿದುಬಂದಿರುವುದಿಲ್ಲ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…