ರವಿ ಡಿ.ಚನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂಡಿ ಸ್ಥಾನದಿಂದ, ಆಂತರಿಕ ಭದ್ರತಾ ವಿಭಾಗ DIG ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇಂದು ರವಿ ಡಿ.ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗ DIGಯಾಗಿ ವರ್ಗಾವಣೆ ಮಾಡಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅಧಿಕಾರಿಗಳಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಹಿರಿಯ ಅಧಿಕಾರಿಗಳ ವರ್ಗಾವಣೆ, ಇಲಾಖೆಯ ಸಿಬ್ಬಂದಿಗೆ ಕಠಿಣ ಆದೇಶ ಸೇರಿದಂತೆ ಇತರೆ ಮಾರ್ಪಾಡುಗಳನ್ನು ತರಲಾಗುತ್ತಿದೆ.