ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧಾ

2026 ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ರಸಗೊಬ್ಬರ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ಕೃಷಿ ಪರಿಕರ ತಯಾರಕರ ಮತ್ತು ಮಾರಾಟಗಾರರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ರಸಗೊಬ್ಬರ ಲಭ್ಯತೆಯ ಬಗ್ಗೆ ಅರಿವು ಮೂಡಿಸಲು ಮತ್ತು ರಸಗೊಬ್ಬರಗಳಿಗೆ ಪರ್ಯಾವಾಗಿ ಸಾವಯವ ಗೊಬ್ಬರಗಳನ್ನು ಹೆಚ್ಚು ಬಳಕೆ ಮಾಡುವಂತೆ, ರಸಗೊಬ್ಬರ ಮಾರಾಟ ಮಳಿಗೆಯ ಮುಂದೆ ದಾಸ್ತಾನು ಮತ್ತು ಗರಿಷ್ಠ ಮಾರಾಟ ದರ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಮತ್ತು ಯೂರಿಯಾ ರಸಗೊಬ್ಬರವನ್ನು POS Machineನಲ್ಲಿ ಕಡ್ಡಾಯವಾಗಿ ಮಾರಾಟ ಮಾಡಲು ಕ್ರಮ ವಹಿಸಬೇಕು.

ಜಿಲ್ಲೆಗೆ ಸರಬರಾಜಾಗಿರುವ ರಸಗೊಬ್ಬರಗಳನ್ನು ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡದಂತೆ, ಅಧಿಕೃತ ರಸಗೊಬ್ಬರ ಮಾರಾಟ ಪರವಾನಗೆ ಇಲ್ಲದೆ ರಸಗೊಬ್ಬರ ದಾಸ್ತಾನು ಮತ್ತು ಮಾರಾಟ ಮಾಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಯೂರಿಯಾವನ್ನು ಕೆ-ಕಿಸಾನ್ ತಂತ್ರಾಂಶದ ಮೂಲಕ ಮಾರಾಟಮಾಡಲು ಪ್ರತಿ ತಾಲ್ಲೂಕಿನಲ್ಲಿ ಚಿಲ್ಲರೆ ಮಾರಾಟಗಾರರಿಗೆ ತರಬೇತಿಗಳನ್ನು ಆಯೋಜಿಸಲು ಸಹಾಯಕ ಕೃಷಿ ನಿರ್ದೇಶಕರಿಗೆ ಡಿಸಿ ಸೂಚಿಸಿದರು.

ಪ್ರಸಕ್ತ ಮುಂಗಾರು ಹಂಗಾಮಿಗೆ 69291 ಹೆಕ್ಟೇರ್ ಆಹಾರಧಾನ್ಯ ಮತ್ತು 257 ಹೆಕ್ಟೇರ್ ಎಣ್ಣೆಕಾಳು ಸೇರಿ ಒಟ್ಟು 69548 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು. ಬಿತ್ತನೆಗೆ ಅನುಗುಣವಾಗಿ ಮಾಹೆವಾರು ಈ ಮುಂಗಾರು ಹಂಗಾಮಿಗೆ ಯೂರಿಯಾ-11418 ಮೆ.ಟನ್, ಡಿಎಪಿ-7567 ಮೆ.ಟನ್, ಎಂಒಪಿ-1354 ಮೆ.ಟನ್, ಎಸ್ಎಸ್ ಪಿ -1086 ಮೆ.ಟನ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳು 14744 ಮೆ.ಟನ್ ಸೇರಿದಂತೆ ಒಟ್ಟು-36169ಮೆ.ಟನ್ ಬೇಡಿಕೆಯಿದೆ.

ಪ್ರಸ್ತುತ ಮಾಹೆಯಲ್ಲಿ 1732ಮೆ.ಟನ್‌ ಡಿಎಪಿ, 1327ಮೆ.ಟನ್ ಯೂರಿಯಾ ಮತ್ತು 2303ಮೆ.ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ಬೇಡಿಕೆಯಿದೆ. ಈ ಬೇಡಿಕೆ ಪೂರೈಸಲು ಪ್ರಸ್ತುತ 17482 ಮೆ.ಟನ್ ವಿವಿಧ ರಸಗೊಬ್ಬರಗಳ ದಾಸ್ತಾನು ಇರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.

ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಯ ವಿವಿಧ ಅಧಿಕಾರಿಗಳು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ತಯಾರಿಕಾ ಕಂಪನಿಗಳ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಚಿಲ್ಲರೆ ಮತ್ತು ಸಗಟು ರಸಗೊಬ್ಬರ ಮಾರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

11 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

14 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

17 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

19 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

20 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago