ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ-‌ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ರವರು ತಿಳಿಸಿದ್ದಾರೆ.

ದೇವನಹಳ್ಳಿಯ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯ, ಸಭಾಂಗಣದಲ್ಲಿ ನಡೆದ ರಸಗೊಬ್ಬರ ತಯಾರಕರು, ಸರಬರಾಜುದಾರರು ಮತ್ತು ಮಾರಾಟಗಾರರ ಸಭೆಯಲ್ಲಿ ಮಾತನಾಡಿ

2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.

ಕೆ-ಕಿಸಾನ್ ತಂತ್ರಾಂಶದ ಬಳಕ ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೆ ಕಿಸಾನ್ ತಂತ್ರಾಂಶದ ಮೂಲಕ ವಿತರಿಸಲಾಗುವುದು ಎಂದರು.

ಹೊಸ ಎಫ್ಐಡಿ ನೋಂದಣಿ: ಈವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ಕೂಡಲೇ ತಮ್ಮ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕಾ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಬೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೆ ಎಫ್.ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆನಂಬರ್ ಗಳನ್ನು ಅದಕ್ಕೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ.

ಮಾರಾಟಗಾರರಿಗೆ ಎಚ್ಚರಿಕೆ: ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್ಐಡಿ ನಮೂದಿಸಿ ಗೊಬ್ಬರ ಮಾರಾಟಮಾಡಬೇಕು ಇದಕ್ಕೆ ಸಂಬಂಧಿಸಿದಂತೆ ಇಲಾಖೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ ಚಿಲ್ಲರೆ ರಸಗೊಬ್ಬರ ಮಾರಾಟ ಗಾರರು ತಮ್ಮ ಎಲ್ಲ “ಓ” ಫಾರಂಗಳನ್ನು ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ‘ಓ’ ಫಾರಂಗಳ ನೋಂದಣಿ ಇಲ್ಲದೆ ಮಾರಾಟ ಮಾಡಿದರೆ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ರಸಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಾಗಿಯನ್ನು ರದ್ದುಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

36 minutes ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

6 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago