ರಸ್ತೆಗೆ ಹರಿದ ಮಲಮಿಶ್ರಿತ ಕೊಳಚೆ ನೀರು: ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ಬರುವ ದುರ್ವಾಸನೆಕ್ಕೆ‌ ಜನ ಹೈರಾಣು

ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.

ಬಸವೇಶ್ವರ ನಗರದ ಬಿಜೆಪಿ‌ ಕಚೇರಿ ಸಮೀಪ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಎದುರು ಮ್ಯಾನ್ ಹೋಲ್ ನಲ್ಲಿ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ. ಮಳೆ ನಿಂತರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ ನೀರು ನಿಲ್ಲುವುದಿಲ್ಲ. ಮನೆಗಳ ಮುಂದಿನ ರಸ್ತೆಗಳಲ್ಲೇ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ದುರ್ವಾಸನೆ ಜನರಲ್ಲಿ ಅಸಹ್ಯ ತರಿಸಿದೆ.

ಮ್ಯಾನ್ ಹೋಲ್ ಸ್ವಚ್ಛ ಮಾಡಿಸುವಂತೆ ಸಾಕಷ್ಟು ಮನವಿ ಮಾಡಿದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ. ವಾರ್ಡಿನ ನಗರಸಭೆ ಸದಸ್ಯರಿಗೆ ಈ ಕುರಿತು ತಿಳಿಸಿದ ಬಳಿಕ ಮ್ಯಾನ್ ಹೋಲ್ ದುರಸ್ತಿ ಮಾಡಿಸಲಾಯಿತು. ಆದರೆ, ಮಳೆ ಬಂದ ನಂತರ ಮತ್ತೆ ಉಕ್ಕಿ ಹರಿಯುತ್ತಿದೆ. ಕೊಳಚೆ ನೀರು ಮನೆಯ ಮುಂದೆ ಹರಿಯುತ್ತಿದ್ದಯ, ದುರ್ವಾಸನೆ ಇರಲಾಗುತ್ತಿಲ್ಲ. ಕಿಟಕಿ, ಬಾಗಿಲು‌ ಮುಚ್ಚಿಕೊಂಡರೂ ವಾಸನೆಗೆ ಇರಲಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಗಂಗಾಂಭಿಕೆ ಅಳಲು ತೋಡಿಕೊಂಡರು.

ಬಸವೇಶ್ವರ ನಗರದ ರಸ್ತೆಯ ಮ್ಯಾನ್ ಹೋಲ್ ನಿಂದ ಹರಿಯುವ ನೀರು ಸೋಮೇಶ್ವರ ಬಡಾವಣೆಯ ರಸ್ತೆಯವರೆಗೂ ಹರಿದು ಸಂಗ್ರಹವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ‌. ರಾತ್ರಿ ವೇಳೆ ಮನೆಗಳಿಗೆ ಬರಬೇಕಾದರೆ ಸರಿಯಾದ ರಸ್ತೆಯಿಲ್ಲ. ಕೊಳಚೆ ನೀರಿನಲ್ಲಿ ನಡೆದು ಬರುವುದು ಅಸಹನೀಯವಾಗಿದೆ ಎಂದು ದೂರಿದರು.

ಇನ್ನು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಬಳಿಯೂ ಇದೇ ಅವಾಂತರ. ಈ ಬಗ್ಗೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಏನು ಕ್ರಮ ಕೈಗೊಂಡಿಲ್ಲ. ಕಳೆದ ಹಲವು ದಿನಗಳಿಂದ ಮಲ‌ ಮಿಶ್ರಿತ ಕೊಳಚೆ ನೀರು ಉಕ್ಕುತ್ತಿದ್ದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

2 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

3 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

9 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

10 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

16 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago