ರಸ್ತೆ ಅಗೆದು ವರ್ಷವಾದರೂ ಪೂರ್ಣಗೊಂಡಿಲ್ಲ: ನಿತ್ಯ ಕಿರಿಕಿರಿ ಖಾಜಿಕಲ್ಲಹಳ್ಳಿ ಹರೀಶ್ ಆಕ್ರೋಶ

 

ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳಿಗಾಗಿ ಕೆಐಎಡಿಬಿ ವತಿಯಿಂದ ಕೆ.ಸಿ ವ್ಯಾಲಿ ನೀರು ಅಳವಡಿಸಲು ಕಾಮಗಾರಿ ನಡೆಯುತ್ತಿದೆ ಆದರೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಕಾಮಗಾರಿಗಾಗಿ ಅಗೆದಿರುವ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯ ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿ ಜನಸಂದಣಿ ಕೂಡ ಹೆಚ್ಚಾಗಿದೆ ಜೊತೆಗೆ ಸಾವಿರಾರು ಜನ ದಿನನಿತ್ಯ ಕೈಗಾರಿಕೆಗಳಿಗೆ ಕೆಲಸಕ್ಕೆ ಬರುತ್ತಾರೆ ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕೈಗಾರಿಗಳಿಗೆ ಕೆ.ಸಿ ವ್ಯಾಲಿ ನೀರು ಒದಗಿಸಲು ರಸ್ತೆ ಅಗೆದು ವರ್ಷವಾಗಿದೆ ಒಂದು ಕಡೆಯ ರಸ್ತೆ ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ಮಾತ್ರ ವಾಹನಗಳಿಗೆ ಅವಕಾಶ ನೀಡಿದ್ದಾರೆ ಇದರಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಕಾರ್ಮಿಕರು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ನೀಡುವುದು ಸರಿಯಾದ ಕ್ರಮವಲ್ಲ ಕೂಡಲೇ ಅಗೆದಿರುವ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು

ನರಸಾಪುರ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆ ಕಾಮಗಾರಿ ನಡೆಯುತ್ತಿದ್ದು ಇದರಿಂದಾಗಿ ಪ್ರತಿನಿತ್ಯ ಬೆಂಗಳೂರಿಗೆ ಹೋಗಿ ಬರಲು ಸರ್ವಿಸ್ ರಸ್ತೆಯನ್ನು ಬಳಸಬೇಕಾಗಿದೆ ಭಾನುವಾರ ಸಂಜೆ ಕನಿಷ್ಠ ಮೂರು ಕಿಮಿ ದೂರದಷ್ಟು ಟ್ರಾಫಿಕ್ ಜಾಮ್ ನಿಂದಾ ತೊಂದರೆ ಅನುಭವಿಸಲಾಗಿದೆ ಈ ರಸ್ತೆಯಲ್ಲಿಯೇ ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರಿಗೆ ಹೋಗಿಬರಬೇಕಾಗಿದೆ ಈ ರಸ್ತೆಯಲ್ಲಿ ಸಂಚರಿಸುವಾಗ ವೃದ್ಧರು ಮತ್ತು ಮಕ್ಕಳು ಬಿದ್ದು ಗಾಯ ಮಾಡಿಕೊಂಡ ನಿದರ್ಶನಗಳಿವೆ. ಕಾಮಗಾರಿಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!