ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟ ಯುವಕ: ಮೃತ ಯುವಕನ ಕಣ್ಣುಗಳನ್ನು ದಾನ‌ ಮಾಡಿದ ಪೋಷಕರು

ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟಿದ್ದ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಸಾವು ಮತ್ತೊಬ್ಬ ವ್ಯಕ್ತಿಯ ಬಾಳಲ್ಲಿ ಬೆಳಕಾಗಿದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ತಿಮ್ಮಸಂದ್ರ ಗ್ರಾಮದ ಮುನೇಗೌಡ (34) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಗಸ್ಟ್ 12 ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಮನೆಯತ್ತ ಬರುವಾಗ ಸೆಲ್ಫ್ ಆಕ್ಸಿಡೆಂಟ್ ನಲ್ಲಿ  ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆತನನ್ನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬ್ರೈನ್ ಡೆತ್ ಆದ ಹಿನ್ನೆಲೆ ವೈದ್ಯರು ಮುನೇಗೌಡರ ಸಾವನ್ನು ಘೋಷಣೆ ಮಾಡಿದ್ದಾರೆ.

ಮೃತ ಮುನೇಗೌಡರಿಗೆ ಮದುವೆ ನಿಶ್ಚಿತಾರ್ಥವಾಗಿದ್ದ ಇದೇ ತಿಂಗಳು ಮದುವೆ ದಿನವನ್ನ ನಿಶ್ಚಯ ಮಾಡಲಾಗಿತ್ತು. ಆದರೆ, ಮದುವೆ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬದವರ ದುಃಖವನ್ನ ಹೆಚ್ಚು ಮಾಡಿದೆ. ಮಗನ ಸಾವಿನ ದುಃಖದ ನಡುವೆ ಹೆತ್ತವರು ಇಡೀ ದೇಹವನ್ನ ಆಸ್ಪತ್ರೆಗೆ ದಾನ ಮಾಡಲು ತಿರ್ಮಾನ ಮಾಡಿದ್ದರು, ಆದರೆ, ದೇಹದಲ್ಲಿ ಕಣ್ಣುಗಳನ್ನ ದಾನ ಮಾಡಲು ಸೂಕ್ತವಾಗಿದ್ದ ಕಾರಣಕ್ಕೆ ನೇತ್ರದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಮುನೇಗೌಡರ ಹೆತ್ತವರಿಗೆ ಗ್ರಾಮದ ಮುಖಂಡರು ಮೆಚ್ಚಿಗೆಯನ್ನ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

15 minutes ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

8 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

11 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

14 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

15 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

17 hours ago