ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತೋಡಲಬಂಡೆ ಸಮೀಪ ಸಂಭವಿಸಿದೆ.

ಮೃತರನ್ನು ಕಾಳೇನಹಳ್ಳಿ ಗ್ರಾಮದ ರೇಣುಕೇಶ್ (49) ಎಂದು ಗುರುತಿಸಲಾಗಿದೆ. ರೇಣುಕೇಶ್ ತಂಬೇನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದರು.

ಮೃತ ರೇಣುಕೇಶ್, ಚಿತ್ರ ನಿರ್ಮಾಪಕ ಸಾರಥಿ ಸತ್ಯಪ್ರಕಾಶ್ ಅವರ ಸಹೋದರರಾಗಿದ್ದು, ಮಡದಿ ಮತ್ತು ಮಕ್ಕಳನ್ನು ಅಗಲಿದ್ದಾರೆಂದು ಮೂಲಗಳು ತಿಳಿಸಿವೆ.

ಮೃತರ ಅಗಲಿಕೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘಟನೆಗಳು, ಶಿಕ್ಷಕರ ವರ್ಗ ಸಂತಾಪ ಸೂಚಿಸಿದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *