ರಸ್ತೆ ಇಕ್ಕೆಲಗಳಲ್ಲಿ ಕಸದ ರಾಶಿ- ವಾಹನ ಸವಾರರ ಪರದಾಟ: ಕಸ ವಿಲೇವಾರಿ ಮಾಡಲು ಸಾರ್ವಜನಿಕರ ಆಗ್ರಹ

ದಾಬಸ್ಪೇಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಪರ್ಕ ತ್ಯಾಜ್ಯ ವಿಲೇವಾರಿಯಾಗದ ಕಾರಣ ದಾಬಸ್ಪೇಟೆ ಮುಖ್ಯ ರಸ್ತೆಯ ನೀಡವನದ ಹೈವೆ ಪಕ್ಕ ಇರುವ ಸರ್ವಿಸ್ ರಸ್ತೆ ಇಕ್ಕೆಲಗಳಲ್ಲಿ ರಾಶಿಗಟ್ಟಲೇ ಕಸ ಸುರಿಯುತ್ತಿರುವುದರಿಂದ ಗಬ್ಬೆದ್ದು ನಾರುತ್ತಿದೆ.

ಕೋಳಿ ತ್ಯಾಜ್ಯ, ಹೋಟೆಲ್ ತ್ಯಾಜ್ಯ, ಕೊಳೆತ ತರಕಾರಿ ತ್ಯಾಜ್ಯ, ಪ್ಲಾಸ್ಟಿಕ್ ಸೇರಿದಂತೆ ಇತರೆ ತ್ಯಾಜ್ಯವನ್ನು ರಸ್ತೆಯಲ್ಲಿ ಹಾಕಲಾಗುತ್ತಿದೆ. ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಜನ ಓಡಾಡುತ್ತಾರೆ. ಸದ್ಯ ಈ ತ್ಯಾಜ್ಯ ಗಬ್ಬೆದ್ದು ನಾರುತ್ತಿದ್ದು, ಮೂಗು ಮುಚ್ಚಿಕೊಂಡು ಜನ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತ್ಯಾಜ್ಯದಿಂದ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆ ಇದೆ. ತ್ಯಾಜ್ಯ‌ ತಿನ್ನಲು ನೂರಾರು ನಾಯಿಗಳು ಇಲ್ಲಿ ಜಮಾಯಿಸುತ್ತವೆ. ನಾಯಿಗಳು ಒಂದೊಕ್ಕೊಂದು ಕಚ್ಚಾಡುತ್ತ ರಸ್ತೆಗೆ ಬರುತ್ತವೆ. ಆಗ ವಾಹನ ಸವಾರರು ಅಪಘಾತಗಳಿಂದಾಗಿ ಸಾವು-ನೋವು ಅನುಭವಿಸುತ್ತಿದ್ದಾರೆ. ಇರುವ ಕಸ ವಿಲೇವಾರಿ ಮಾಡಲು, ಇನ್ನೂ ಮುಂದೆ ರಸ್ತೆ ಇಕ್ಕೆಲಗಳಲ್ಲಿ ಕಸ ಹಾಕದಂತೆ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಆಟೋ ಡ್ರೈವರ್ ಪ್ರೇಮ್ ಕುಮಾರ್ ದೂರಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

8 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

12 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

14 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

14 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

16 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

20 hours ago