ನಗರದಲ್ಲಿ ಪ್ರಸ್ತುತ ಚರ್ಚೆಗೆ ಗ್ರಾಸವಾಗಿರೋ ವಿಷಯವೆನೆಂದರೆ ರಸ್ತೆಗಳನ್ನು ಅತಿಕ್ರಮಣ ಮಾಡಿ ಅಪಘಾತ, ವಾಹನ ದಟ್ಟಣೆಗೆ ಕಾರಣವಾಗಿರುವ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆ, ಶೆಡ್, ಅಂಗಡಿಗಳನ್ನ ತೆರವುಗೊಳಿಸುವುದು.
ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿ, ಮನೆ, ಶೆಡ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಹಲವು ಹೋರಾಟಗಾರರು ಮನವಿ ಸಲ್ಲಿಸಿದ್ದಾರೆ. ಈ ಮನವಿ ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ. ರಸ್ತೆ ಬದಿಯಲ್ಲಿನ ವ್ಯಾಪಾರಸ್ಥರಿಗೆ ಎಲ್ಲಿ ನಮ್ಮ ಅಂಗಡಿಗಳನ್ನು ತೆರವುಗೊಳಿಸುತ್ತಾರೋ ಎಂಬ ಸಂಕಷ್ಟದಲ್ಲಿದ್ದಾರೆ.
ಈಗಾಗಲೇ ಹಲವು ದಿನಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ, ತಾಲೂಕು ಆಡಳಿತ, ನಗರಸಭೆ ಹಾಗೂ ಡಿವೈಎಸ್ಪಿ ಅವರಿಗೂ ಮನವಿ ಪತ್ರವನ್ನು ಸಲ್ಲಿಸಲಾಗಿದೆ, ಬೆಸ್ಕಾಂ ಅಧಿಕಾರಿಗಳು ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದಾರೆ, ಲೋಕೋಪಯೋಗಿ ಆಸ್ತಿಗಳನ್ನು ಕಬಳಿಸಲಾಗಿದ್ದು ಅವುಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ರಸ್ತೆ ಒತ್ತುವರಿ ತೆರವಿನ ಕುರಿತು 2006ರಲ್ಲಿ ಸುಪ್ರೀಂಕೋರ್ಟ್ ಆದೇಶ ಮಾಡಿದೆ, 2010ರಲ್ಲಿ ಅದೇ ಆದೇಶವನ್ನು ರಾಜ್ಯ ಸರ್ಕಾರ ಆದೇಶ ಮಾಡಿದೆ, ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ್ ಸಾಲಿಯಾನ ಅವರು ಸಹ ರಸ್ತೆ ಒತ್ತುವರಿ ತೆರವು ಮಾಡುವಂತೆ ಅಧಿಕಾರಿಗಳಿಗೆ ಮೌಖಿಕವಾಗಿ ಆದೇಶಿಸಿದ್ದು ಅವುಗಳನ್ನು ಅಧಿಕಾರಿಗಳು ಪಾಲಿಸಬೇಕು ಎಂದು ತಿಳಿಸಿದರು.
ನಮ್ಮ ಹೋರಾಟ ಸಾರ್ವಜನಿಕರ ಪರವಾಗಿದ್ದು. ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯವಾಗಬೇಕು ತಪ್ಪಿದಲ್ಲಿ ನಮ್ಮ ಹೋರಾಟ ನಿರಂತರವಾಗಿರಲಿದ್ದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.
ರಸ್ತೆ ಬದಿಯಲ್ಲಿನ ಫುಟ್ ಪಾತ್ ಹಾಗೂ ನಗರಸಭೆಗೆ ಸೇರಿದ ಜಾಗವನ್ನು ಆಕ್ರಮಿಸಿಕೊಂಡು ಹೋಟೆಲ್, ಹಣ್ಣಿನ ಅಂಗಡಿ ಹಾಗೂ ಮಾಂಸದ ಮಳಿಗೆಗಳನ್ನು ತೆರೆಯಲಾಗಿದ್ದು ಇತ್ತೀಚೆಗೆ ಸಾರ್ವಜನಿಕರು ಹೆಚ್ಚಿನ ಹಿಂಸೆ ಅನುಭವಿಸುವಂತಾಗಿದೆ ಎಂದರು.
ನಗರದಲ್ಲಿ ಕೈಗಾರಿಕೆ ಹಾಗೂ ಮಗ್ಗಗಳಲ್ಲಿ ಕೆಲಸ ಮಾಡಲು ಪ್ರತೀ ದಿನ 5000 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಓಡಾಡುತ್ತಿದ್ದಾರೆ, ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿದ್ದು ಬೇಸರದ ಸಂಗತಿಯಾಗಿದೆ ಎಂದರು.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…