ನಗರದಲ್ಲಿ ಅನಧಿಕೃತವಾಗಿ ರಸ್ತೆ ಒತ್ತುವರಿ ಮಾಡಿ ವ್ಯಾಪಾರ ವಹಿವಾಟು, ವಾಸ ಇರೋದಕ್ಕೆ ನಿರ್ಮಿಸಿಕೊಂಡಿದ್ದ ಮನೆ, ಅಂಗಡಿಗಳನ್ನು ತೆರವು ಮಾಡುತ್ತಿರುವ ನಗರಸಭೆ ಪೌರಾಯುಕ್ತ ಪರಮೇಶ್ ನೇತೃತ್ವದ ತಂಡ.
ದಿನೇ ದಿನೇ ನಗರದಲ್ಲಿ ಹೆಚ್ಚುತ್ತಿರುವ ಅಪಘಾತ, ವಾಹನ ದಟ್ಟಣೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿರುವ ಹಿನ್ನೆಲೆ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರೋ ಅಂಗಡಿ, ಶೆಡ್, ಮನೆಗಳನ್ನು ತೆರವುಗೊಳಿಸುವಂತೆ ಹಲವು ಸಂಘಟನೆಗಳು, ಸಾರ್ವಜನಿಕರ ಮನವಿ ಮೇರೆಗೆ ನಗರಸಭೆ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ ವತಿಯಿಂದ ತೆರವು ಕಾರ್ಯಾಚರಣೆ ನಡೆಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ(ಟಿ.ಬಿ.ಸರ್ಕಲ್), ಬಯಲು ಬಸವಣ್ಣ ದೇವಸ್ಥಾನದ ಸುತ್ತಮುತ್ತಲಿನ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆ ಬದಿಯಲ್ಲಿರುವ ಅಂಗಡಿ, ಶೆಡ್ ಗಳನ್ನು ತೆರವುಗೊಳಿಸಲಾಯಿತು. ಇನ್ನೂ ಮುಂದೆ ರಸ್ತೆ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿರುವವರ ತೆರವು ಕೂಡ ಮಾಡಲಾಗುವುದು ಎಂದು ಪೌರಾಯುಕ್ತ ಪರಮೇಶ್ ತಿಳಿಸಿದರು.
ತೆರವು ಕಾರ್ಯಾಚರಣೆ ವೇಳೆ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಪರಿಸರ ವಿಭಾಗದ ಎಂಜಿನಿಯರ್ ಈರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.