ರಸ್ತೆ ಗುಂಡಿ ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು- ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಸೂಚನೆಗಳನ್ನು ನೀಡಿದೆ.

ಸಭೆಯ ಮುಖ್ಯಾಂಶಗಳು ಹೀಗಿವೆ:

* ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ.

* ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು.

* ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

* ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು,
ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಬೇಕು.

* ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ, ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು.

* ಬಿಡಿಎ, ಬಿಎಂಆರ್‌ಸಿಎಲ್, ಜಲಮಂಡಳಿ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು.

* ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು.

* ಮುಖ್ಯ ಆಯುಕ್ತರು ಪ್ರತಿ ವಾರ ಐದೂ ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.

* ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.
* ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು

* ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ
1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.

* ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು, 8,046 ಗುಂಡಿಗಳು ಮುಚ್ಚಲು ಬಾಕಿ ಇವೆ.

* ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.

* ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.

* ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ರೂ. 25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.

* ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು ರೂ. 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.

* ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು.

* ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್ ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ರೂ.400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ದಿ ಪಡಿಸಲು ಉದ್ದೇಶಿಸಲಾಗಿದೆ.

* ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

12 minutes ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

6 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

20 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

21 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

22 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

22 hours ago