ನೆಲಮಂಗಲ ಸಂಚಾರ ಪೊಲೀಸ್ ಠಾಣಾ ಸರಹದಿನ ಲಕ್ಷ್ಮಿಪುರ ಕ್ರಾಸ್, ಮಾದನಾಯಕನಹಳ್ಳಿ ಬಳಿ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ ರಸ್ತೆಗೆ ಮೆಟ್ರೋ ಕಾಮಗಾರಿ ಗಾಡಿಯಿಂದ ಟಾರ್ ಕಡಿಯನ್ನು ಗುಂಡಿಗೆ ಹಾಕಿಸಿ ಸಾರ್ವಜನಿಕರಿಗೆ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಸ್ತೆಯಲ್ಲಿ ಬಿದ್ದ ಗುಂಡಿಗಳಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು. ಕೆಲವೊಮ್ಮೆ ಈ ರಸ್ತೆ ಗುಂಡಿಗಳಿಂದ ಅಪಘಾತಗಳು ಸಂಭವಿಸಿ ಗಂಭೀರ ಗಾಯಗಳಿಂದ ವಾಹನ ಸವಾರರು ನೋವನ್ನು ಅನುಭವಿಸಿದ್ದರು.
ಈ ಹಿನ್ನೆಲೆ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ ರಸ್ತೆಗೆ ಮೆಟ್ರೋ ಕಾಮಗಾರಿ ಗಾಡಿಯಿಂದ ಟಾರ್ ಕಡಿಯನ್ನು ಗುಂಡಿಗೆ ಹಾಕಿಸಿ, ಸ್ವತಃ ತಾವೇ ಗುಂಡಿ ಮುಚ್ಚುವ ಕೆಲಸ ಮಾಡಿ ಸಾರ್ವಜನಿಕರಿಗೆ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…