ರಸ್ತೆ ದಾಟುತ್ತಿದ್ದ ವೃದ್ಧನಿಗೆ ಸಿಮೆಂಟ್ ಲಾರಿ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಸಾವು

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ನಿನ್ನೆ ರಾತ್ರಿ ಸುಮಾರು 10:50ರ‌ ಸಮಯದಲ್ಲಿ ರಸ್ತೆ ದಾಟುತ್ತಿದ್ದ ವೃದ್ಧನಿಗೆ ಸಿಮೆಂಟ್ ತುಂಬಿದ್ದ ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ರಭಸಕ್ಕೆ ವೃದ್ಧನಿಗೆ ಗಂಭೀರಗಾಯಗಳಾಗಿತ್ತು. ಬಲಗಾಲು ಮುರಿದಿತ್ತು. ಗಾಯಾಳು ವೃದ್ಧನನ್ನು ಕೂಡಲೇ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಸಾವನ್ನಪ್ಪಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸದ್ಯ ಮೃತ ವೃದ್ಧನ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ.

ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ.‌ ಡಿಕ್ಕಿ ಹೊಡೆದ ಕ್ಯಾಂಟರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಬಂದಿದೆ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!