ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ನಿನ್ನೆ ರಾತ್ರಿ ಸುಮಾರು 10:50ರ ಸಮಯದಲ್ಲಿ ರಸ್ತೆ ದಾಟುತ್ತಿದ್ದ ವೃದ್ಧನಿಗೆ ಸಿಮೆಂಟ್ ತುಂಬಿದ್ದ ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ರಭಸಕ್ಕೆ ವೃದ್ಧನಿಗೆ ಗಂಭೀರಗಾಯಗಳಾಗಿತ್ತು. ಬಲಗಾಲು ಮುರಿದಿತ್ತು. ಗಾಯಾಳು ವೃದ್ಧನನ್ನು ಕೂಡಲೇ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಸಾವನ್ನಪ್ಪಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸದ್ಯ ಮೃತ ವೃದ್ಧನ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿ ಹೊಡೆದ ಕ್ಯಾಂಟರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಬಂದಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…