ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ವಿದ್ಯುತ್ ಕಂಬ

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಮಧುರನಹೊಸಹಳ್ಳಿ-ಹಾದ್ರಿಪುರ ರಸ್ತೆಯಲ್ಲಿ ಇಂದು ಸಂಜೆ ಸುಮಾರು 7 ಗಂಟೆಯಲ್ಲಿ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾ ಹಾನಿ ಸಂಭವಿಸಿಲ್ಲ.

ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿ, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸಿದ್ದಾರೆ.

ಸದ್ಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಚಾಲಕ  ಪರಾರಿಯಾಗಿದ್ದಾನೆ…

Leave a Reply

Your email address will not be published. Required fields are marked *

error: Content is protected !!