ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲ- ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್

ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಕಸದ ರಾಶಿಗಳಿಂದಾಗಿ ಸಾರ್ವಜನಿಕರು ಮೂಗುಮುಚ್ಚಿಕೊಂಡು ಓಡಾಡುವಂತಾಗಿದೆ ಎಂದು ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್ ದೂರಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಅವರ ಅಧ್ಯಕ್ಷಯೆಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ನೀಡಲಾಗಿದ್ದ ಸ್ಥಳ ವಿವಾದ ನ್ಯಾಯಾಲಯದಲ್ಲಿ ಇರುವುದರಿಂದ ಬಾಡಿಗೆ ಕಟ್ಟಡದಲ್ಲಿ ತಾಲ್ಲೂಕು ಗ್ರಂಥಾಲಯ ಕಾರ್ಯನಿರ್ವಹಿಸುವಂತಾಗಿದೆ. ನಗರಸಭೆ ವತಿಯಿಂದ ಸೂಕ್ತ ಸ್ಥಳ ನೀಡುವ ಮೂಲಕ ಸಾವಿರಾರು ಜನ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಬಳಕೆಯಾಗುವಂತೆ ಮಾಡಬೇಕಿದೆ ಎಂದರು.

ಸ್ವಚ್ಛತೆಯ ವಿಚಾರದಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ವಾರ್ಡ್ ಗಳಲ್ಲಿ ಸ್ವಚ್ಛತೆ ಇಲ್ಲದೇ ಇರುವುದರಿಂದ ಜನರು ಕೇಳುವ ಪ್ರಶ್ನೆಗೆ ಉತ್ತರ ಹೇಳುವುದೇ ಕಷ್ಟವಾಗಿದೆ ಎಂದು ಸದಸ್ಯರಾದ ಇದ್ರಾಂಣಿ, ನಾಗಮಣಿ, ಸುಮಿತ್ರ ಅವರು ಪರಿಸರ ವಿಭಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹತ್ತಾರು ವರ್ಷಗಳಿಂದಲು ಬಡ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಹಾಗೆಯೇ ಬಡವರ ಆರೋಗ್ಯಕ್ಕು ಕನಿಷ್ಠ ಮೊತ್ತದ ನೆರವನ್ನು ನೀಡಲಾಗುತಿತ್ತು. ಆದರೆ ಕಳೆದ ಎರಡು ವರ್ಷಗಳಿಂದಲು ಇದಕ್ಕೆ ಅವಕಾಶ ಇಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ. ನಮ್ಮ ತೆರೆಗೆ ಹಣವನ್ನು ನಾವು  ಖರ್ಚು ಮಾಡುವುದಕ್ಕೆ ಅಧಿಕಾರ ಇಲ್ಲ ಅಂದಮೇಲೆ ನಮ್ಮ ತೆರಿಗೆಯ ಮೇಲೆ ನಮಗೆ ಹಕ್ಕು ಇಲ್ಲವೆ ಎಂದು ಸದಸ್ಯರಾದ ಎಂ.ಜಿ.ಶ್ರೀನಿವಾಸ್, ಟಿ.ಎನ್.ಪ್ರಭುದೇವ್ ಪೌರಾಯುಕ್ತರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಪೌರಾಯುಕ್ತ ಕೆ.ಪರಮೇಶ್, ಸದಸ್ಯರ ಸಲಹೆಯಂತೆ ಬಜೆಟ್ನಲ್ಲಿ ಹಣ ಮೀಸಲಿಡುವ ಮೂಲಕ ವಿದ್ಯಾರ್ಥಿ ವೇತನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ನಗರದಲ್ಲಿ ಎಷ್ಟು ವಾಣಿಜ್ಯ ಮಳಿಗೆ, ಮನೆಗಳ ಖಾತೆಗಳು ಇವೆ, ಇವುಗಳಿಂದ ಎಷ್ಟು ತೆರಿಗೆ ವಸೂಲಿ ಬಾಕಿ ಇದೆ. ಬರಬೇಕಿರುವ ತೆರಿಗೆಯ ಬಾಕಿ ಎಷ್ಟು ಎನ್ನುವ ಲೆಕ್ಕವೇ ನಗರಸಭೆಯಲ್ಲಿ ಇಲ್ಲದೇ ಇರುವುದು ಅಧಿಕಾರಿಗಳ ನಿರ್ಲಕ್ಷ್ಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸಾರ್ವಜನಿಕರು ಪ್ರಶ್ನಿಸಿದರೆ ಉತ್ತರ ನೀಡುವುದಾದರು ಹೇಗೆ.ಖಾತೆದಾರರು ಕಟ್ಟುವ ತೆರಿಗೆ ಅಂಕಿ ಅಂಶಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದೇ ಕಂದಾಯ ವಿಭಾಗದ ಅಧಿಕಾರಿಗಳು ಮಾಡುವ ಕೆಲಸವಾದರು ಏನಿದೆ ಎಂದು ಪ್ರಶ್ನಿಸಿದ ಸದಸ್ಯ ಎಂ.ಜಿ.ಶ್ರೀನಿವಾಸ್.

ನಗರಸಭೆಗೆ ನ್ಯಾಯುತವಾಗಿ ಬರಬೇಕಿರುವ ಕೋಟ್ಯಾಂತರ ರೂಪಾಯಿ ತೆರಿಗೆ ಹಣ ನಷ್ಟವಾಗುತ್ತಿದೆ. ಸೂಕ್ತ ಅಂಕಿ ಅಂಶಗಳು ಗಣಕೀಕೃತವಾಗಬೇಕು. ನಮ್ಮಲ್ಲಿ ಸೂಕ್ತ ದಾಖಲಾತಿಯೇ ಇಲ್ಲದೆ ಖಾತೆದಾರರಿಂದ ತೆರಿಗೆ ವಸೂಲಿ ಮಾಡುವುದಕ್ಕೆ ಅರ್ಥವಾದರು ಇದೆಯೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ಒಳಚರಂಡಿ ವ್ಯವಸ್ಥೆ ಜಾರಿಗೆ ಬಂದು ದಶಕಗಳೆ ಕಳೆಯುತ್ತ ಬಂದಿದೆ. ಆದರೆ ಎಷ್ಟು ಸಂಪರ್ಕಗಳು ಇವೆ, ಇನ್ನು ಸಂಪರ್ಕ ಪಡೆಯದೇ ಇರುವ ಕುಟುಂಬಗಳು ಎಷ್ಟು, ವಾಣಿಜ್ಯ ಮಳಿಗೆಗಳ ಪರವಾನಗಿಯ ಮಾಹಿತಿಯು ನಗರಸಭೆಯಲ್ಲಿ ಇಲ್ಲದಾಗಿದೆ. ಈ ಎಲ್ಲವು ಸೂಕ್ತ ರೀತಿಯಲ್ಲಿ ನಿರ್ವಹಣೆಯಾದರೆ ಸರ್ಕಾರದ ಅನುದಾನ ಇಲ್ಲದೆಯೇ ನಮ್ಮ ತೆರಿಗೆ ಹಣದಲ್ಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಸಲು ಸಾಧ್ಯವಿದೆ ಎಂದರು.

ಸದಸ್ಯರಿಗೆ ಒಂದು ವಾರಗಳ ಕಾಲ ನೀಡಲಾದ ತರಬೇತಿಯಲ್ಲಿ ಅಧ್ಯಕ್ಷರು ಸಹ ಭಾಗವಹಿಸಿದ್ದರು. ಅಧ್ಯಕ್ಷರ ಅಪ್ಪಣೆ ಮೇರೆಗೆ ತುರ್ತು ಕಾಮಗಾರಿಗಳಿಗೆ ಮಾತ್ರ 4 ರಿಂದ 6 ಕೆಲಸಗಳಿಗೆ ಒಪ್ಪಿಗೆ ನೀಡಬಹುದು. ಉಳಿದೆ ಎಲ್ಲಾ ವಿಷಯಗಳು ಸಾಮಾನ್ಯ ಸಭೆಯಲ್ಲಿ ಚರ್ಚೆಯ ನಂತರವೇ ಕೈಗೊಳ್ಳಬೇಕು ಎಂದು ಪಾಠ ಮಾಡಿದ್ದಾರೆ ಎಂದು ಸಭೆಗೆ ಗಮನಕ್ಕೆ ತಂದ ಸದಸ್ಯೆ ಪ್ರಭಾನಾಗರಾಜ್, ಆದರೆ ಇಲ್ಲಿ ನಿಯಮ ಮೀರಿ 17 ವಿಷಯಗಳು ಅಧ್ಯಕ್ಷರ ಅಪ್ಪಣೆ ಮೇರೆಗೆ ನಡೆಸಲಾಗಿದೆ. ಹೀಗಾದರೆ ಸದಸ್ಯರು ಹೇಳುವ ಯಾವುದೇ ಕೆಲಸಗಳಿಗು ಬೆಲೆ ಇಲ್ಲವೆ ಎಂದು ಪ್ರಶ್ನಿಸಿದರು.

ಸದಸ್ಯ ಎಚ್.ಎಸ್. ಶಿವಶಂಕರ್ ಮಾತನಾಡಿ, ಯಾವುದೇ ರೀತಿಯ ಕೊಟೆಷನ್ ಪಡೆಯದೆ, ಟೆಂಡರ್ ಸಹ ಕರೆಯದೆ ಪೌರಕಾರ್ಮಿಕರಿಗೆ ಸುಮಾರು ₹6 ಲಕ್ಷ ವೆಚ್ಚಮಾಡಿ ಕುಕ್ಕರ್ ಖರೀದಿಸಲಾಗಿದೆ. ಇದೇ ನಿಯಮವನ್ನು ಇತರೆ ಖರೀದಿಗಳು, ಕಾಮಗಾರಿಗಳಿಗು ಅನ್ವಯವಾಗಬೇಕು. ಅಧ್ಯಕ್ಷರ ಅಪ್ಪಣೆಯ ಮೇರೆಗೆ ಖರೀದಿಗಳು ನಡೆಯುವುದಾದರೆ ಸದಸ್ಯರ ಅನುಮತಿ ಏಕೆ ಬೇಕು ಎಂದು ಪ್ರಶ್ನಿಸಿದರು.

ಇದಕ್ಕೆ ಧ್ವನಿ ಗೂಡಿಸಿದ ಸದಸ್ಯರಾದ ಪ್ರಭಾ, ಎಂ.ಜಿ.ಶ್ರೀನಿವಾಸ್, ಬಂತಿವೆಂಕಟೇಶ್, ಆನಂದ್, ಹೆಚ್ಚಿನ ಮೊತ್ತದ ಯಾವುದೇ ವಸ್ತುಗಳ ಖರೀದಿಗೆ ಕೇವಲ ಕೋಟೆಷನ್ ಪಡೆದು ಖರೀದಿ ಮಾಡುವ ನಿಯಮ ನಗರಸಭೆಯ ನಿಯಮಗಳಿಗೆ ವಿರುದ್ದವಾಗಿದೆ. ಇವುಗಳು ಮತ್ತೆ ಮರುಕಳಿಸದಂತೆ ಕ್ರಮ ಅಗತ್ಯ ಎಂದರು.

ಸ್ಥಾತಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ಸದಸ್ಯರ ಗಮನಕ್ಕೆ ಬಾರದಂತೆ ಕುಕ್ಕರ್ ಖರೀದಿ ಮಾಡಿರುವುದು ಸದಸ್ಯರ ಸಲಹೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago