ದೊಡ್ಡಬಳ್ಳಾಪುರ: ನಗರದ ದೊಡ್ಡ ಬೆಳವಂಗಲ ರಸ್ತೆಯ ಸಾಯಿ ಬೇಕರಿ ಸಮೀಪ ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಪಾದಚಾರಿಯನ್ನು ಸರ್ಕಾರಿ ಶಾಲೆಯ ಶಿಕ್ಷಕರೆಂದು ಗುರುತಿಸಲಾಗಿದ್ದು, ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರನಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಯಾವುದೇ ಸೂಚನಾ ಫಲಕ ಅಥವಾ ಸುರಕ್ಷತಾ ವ್ಯವಸ್ಥೆ ಇಲ್ಲದೆ ಅನಧಿಕೃತವಾಗಿ ನಿಲ್ಲಿಸುವ ಟಿಪ್ಪರ್ ಲಾರಿಗಳು ವಾಹನ ಸವಾರರಿಗೆ ಕಾಣಿಸದೆ ಅಪಘಾತ ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ರಸ್ತೆಯಲ್ಲಿ ನಿತ್ಯವೂ ದ್ವಿಚಕ್ರ ವಾಹನ ಸವಾರರು ಅಪಘಾತಗಳಿಗೆ ತುತ್ತಾಗುತ್ತಿದ್ದು, ರಸ್ತೆ ಬದಿ ಖಾಸಗಿ ಬಸ್‌ಗಳು ಹಾಗೂ ಟಿಪ್ಪರ್ ಲಾರಿಗಳನ್ನು ನಿಲ್ಲಿಸುವುದನ್ನು ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ವಾಹನಗಳ ಅನಧಿಕೃತ ನಿಲುಗಡೆಗೆ ಕಡಿವಾಣ ಹಾಕಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ನಾಡಿನ ಹೈನುಗಾರರು ಇಂದು ಮೇವು, ಪಶು ಆಹಾರ, ವೈದ್ಯಕೀಯ ಚಿಕಿತ್ಸೆ ಹಾಗೂ ನಿರ್ವಹಣಾ ವೆಚ್ಚದ ಹೆಚ್ಚಳದಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.…
ದೊಡ್ಡಬಳ್ಳಾಪುರ: ಯುವ ಕರ್ನಾಟಕ ವೇದಿಕೆಯ ದೊಡ್ಡಬಳ್ಳಾಪುರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಘಟಕದ ಗೌರವ ಅಧ್ಯಕ್ಷರಾಗಿ…
ಹಾಲು ದರ ಏರಿಕೆ, ಮೊಸರು ದರ ಏರಿಕೆಯ ನಂತರ ಬಸ್ ಟಿಕೆಟ್ ದರ ಏರಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ,…
ದೊಡ್ಡಬಳ್ಳಾಪುರ: ಹಿರಿಯ ನಾಗರಿಕರ ಕಲ್ಯಾಣ ಹಾಗೂ ಡಿಮೆನ್ಷಿಯಾ (ಮರೆವಿನ ಕಾಯಿಲೆ) ಆರೈಕೆಯಲ್ಲಿ ಸುಮಾರು 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಂಗಳೂರಿನ…
ಬೆಂಗಳೂರು: ದೀಪಾವಳಿ ಹಬ್ಬಕ್ಕೂ ಮುನ್ನವೇ ರಾಜ್ಯದ ಜನರಿಗೆ ಸರ್ಕಾರ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ರಾಜ್ಯದ ನಾಲ್ಕು ರಸ್ತೆ…
ಬೆಂಗಳೂರು: ಕರ್ನಾಟಕದ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಬೆಂಗಳೂರು ಮೂಲದ ಆಸ್ಟ್ರೋಬೇಸ್ ಸ್ಪೇಸ್ ಟೆಕ್ನಾಲಜೀಸ್ ಪ್ರೈವೇಟ್…