ರಸ್ತೆ ಬದಿ ನಿಂತಿದ್ದ ಲಾರಿಗೆ ಆಟೋ‌ ಡಿಕ್ಕಿ: ಸ್ಥಳದಲ್ಲೇ ಆಟೋ ಚಾಲಕ‌ ಸಾವು

ರಸ್ತೆ‌ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು 7:30ರ ಸಮಯದಲ್ಲಿ ತಾಲೂಕಿನ ಗುಂಜೂರು ಬಳಿ ನಡೆದಿದೆ.

ಗುಂಜೂರು ಬಳಿ 12 ಚಕ್ರದ ಗೂಡ್ಸ್ ಲಾರಿ ರಸ್ತೆ ಬದಿ ನಿಂತಿತ್ತು,‌ ಲಾರಿ ಚಾಲಕ ಲಾರಿಯಲ್ಲೇ ಊಟ ಮಾಡುತ್ತಿದ್ದನು. ಈ ವೇಳೆ ಗೌರಿಬಿದನೂರು ಕಡೆಯಿಂದ ಬಂದ ಆಟೋ ಏಕಾಏಕಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಡ್ರೈವರ್ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೃತ ವ್ಯಕ್ತಿ ಗೌರಿಬಿದನೂರಿನ ಡಿಪಾಳ್ಯ ಮೂಲದವರು ಎನ್ನಲಾಗಿದೆ. ಹೆಂಡತಿ ಮತ್ತು ತನ್ನ ಒಂಭತ್ತು ತಿಂಗಳ ಮಗುವನ್ನು ನೋಡಲು ದೊಡ್ಡಬಳ್ಳಾಪುರ ತಾಲೂಕಿನ‌ ಶಿರವಾರಕ್ಕೆ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸ್ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

4 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

14 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

18 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago