ರಸ್ತೆ ಬದಿ ಪಾರ್ಕಿಂಗ್ ಮಾಡಿರೋ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಮುಂಜಾನೆ 5:45ರ ಸಮಯದಲ್ಲಿ ತಾಲೂಕಿನ ಓಬದೇನಹಳ್ಳಿ ಬಳಿ ಸಂಭವಿಸಿದೆ.
ತೀವ್ರವಾಗಿ ಗಾಯಗೊಂಡ ಬೈಕ್ ಸವಾರರನ್ನು ಸ್ಥಳೀಯರ ಸಹಾಯದಿಂದ ಸ್ಥಳೀಯ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ರವಾನಿಸಲಾಯಿತು.
ರಸ್ತೆ ಇಕ್ಕೆಲಗಳಲ್ಲಿ ಪ್ರತಿನಿತ್ಯ ಬೃಹತ್ ಗಾತ್ರದ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡುವುದರಿಂದ ಇಂತಹ ಅಪಘಾತಗಳು ಮರುಕಳಿಸುತ್ತಿವೆ, ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಸ್ಥಳಕ್ಕೆ ಪೊಲೀಸ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದರು.