ಇಂದು ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನದ ಪ್ರಯುಕ್ತ ಕಂಬಕ್ಕೆ ಬ್ಯಾನರ್ ಕಟ್ಟಲು ಹೋಗಿದ್ದ ಮೂವರು ಯುವಕರಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಹನಮಂತ ಹರಿಜನ್ (21) ಮುರಳಿ ನಡವಿನಮನಿ (20) ಮತ್ತು ನವೀನ್ ಗಾಜಿ(19) ಸ್ಥಳದಲ್ಲೇ ಸಾವನ್ನಪ್ಪಿರುವ ಮೃತ ದುರ್ದೈವಿಗಳು.
ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಬರ್ತ್ ಡೇ ಪ್ಲಾನ್ ಮಾಡಿಕೊಂಡಿದ್ದರು. ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.
ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…