ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ: ದರ ನಿಗದಿ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 56513 ಹೆಕ್ಟೇ‌ರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದ್ದು, ಕೆಲವೆಡೆ ಕಾಳು ತುಂಬುವ ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ರೂ. 3500 ರಿಂದ ರೂ. 4000 ಗಳ ವರೆಗೆ ಬಾಡಿಗೆ ಹಣ ನಿಗದಿ ಪಡಿಸಿರುವ ಬಗ್ಗೆ ದೇವನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರು ಬಂದಿರುತ್ತದೆ.

ಪ್ರಸ್ತುತ ಸಾಲಿನಲ್ಲಿ ಮಳೆ ಕೊರತೆಯುಂಟಾಗಿ ಬೆಳೆಯು ಹಾನಿಯಾಗಿರುವುದರಿಂದ ರೈತರಿಗೆ ತೀವ್ರ ಆರ್ಥಿಕ ಹೊರೆಯಾಗಲಿದೆ. ಆದುದರಿಂದ ದಿನಾಂಕ: 06.07.2022ರಂದು ಜಿಲ್ಲಾ ಸಮನ್ವಯ ಸಮಿತಿಯ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರ ಅಧ್ಯಕ್ಷತೆಯಲ್ಲಿ ಕೃಷಿ ಯಂತ್ರಧಾರೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ)ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿಪಡಿಸಲಾಗಿದೆ. ಇಂಧನ ವೆಚ್ಚ, ಕಾರ್ಮಿಕರ ಕೂಲಿ ಹಾಗೂ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಪ್ರತಿ ಗಂಟೆಗೆ ನ್ಯೂ ಹಾಲೆಂಡ್, ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ರೂ. 3350 ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತಕ್ಕೆ ರೂ. 2700 ಗೆ ಬಾಡಿಗೆ ನಿಗದಿಪಡಿಸಲಾಗಿದೆ.

ಅದರಂತೆ ಜಿಲ್ಲೆಯಲ್ಲಿ ರಾಗಿ ಬೆಳೆ ಕಟಾವು ಮಾಡುತ್ತಿರುವ ನ್ಯೂ ಹಾಲೆಂಡ್,  ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ರೂ. 3350 ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ರೂ. 2700 ಗಳು ಮೀರದಂತೆ ಪ್ರತಿ ಗಂಟೆಗೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

14 minutes ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

2 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

2 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

7 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

9 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

22 hours ago