ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 56513 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದ್ದು, ಕೆಲವೆಡೆ ಕಾಳು ತುಂಬುವ ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ರೂ. 3500 ರಿಂದ ರೂ. 4000 ಗಳ ವರೆಗೆ ಬಾಡಿಗೆ ಹಣ ನಿಗದಿ ಪಡಿಸಿರುವ ಬಗ್ಗೆ ದೇವನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರು ಬಂದಿರುತ್ತದೆ.
ಅದರಂತೆ ಜಿಲ್ಲೆಯಲ್ಲಿ ರಾಗಿ ಬೆಳೆ ಕಟಾವು ಮಾಡುತ್ತಿರುವ ನ್ಯೂ ಹಾಲೆಂಡ್, ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ರೂ. 3350 ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ರೂ. 2700 ಗಳು ಮೀರದಂತೆ ಪ್ರತಿ ಗಂಟೆಗೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…