ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ-ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3500 ರೂಗಳಿಂದ 4000 ರೂಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.

ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 3350 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಗಂಟೆಗೆ 2700 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

3 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

5 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

7 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

12 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

15 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago