ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 61,513 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿದೆ.
ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.
ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 2700 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಗಂಟೆಗೆ 2200 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ.
ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…