ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3500 ರೂ. ಗಳಿಂದ 4 ಸಾವಿರ ರೂ.ಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಕುರಿತು ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ನಿರ್ದಿಷ್ಟ ಕಂಪನಿಗಳ ದೊಡ್ಡ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ ನಿಗದಿತ 3350 ರೂ. ಹಾಗೂ ಸಣ್ಣ ಯಂತ್ರಗಳಿಗೆ 2700 ರೂ.ಬಾಡಿಗೆ ಮಾತ್ರ ಸಂಗ್ರಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 57370 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆ ಆವರಿಸಿದೆ.ಈಗ ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದೆ. ಕಟಾವು ಕಾರ್ಯ ಪ್ರಗತಿಯಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವ ಕಾರ್ಯವನ್ನು ಯಂತ್ರಗಳ (combined harvesters) ಮೂಲಕ ಕೈಗೊಳ್ಳುತ್ತಿದ್ದಾರೆ.
ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗುವುದನ್ನು ತಪ್ಪಿಸಲು ಜುಲೈ 6 ರಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಯಂತ್ರಧಾರೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ) ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಿದ ಪ್ರಕಾರ, ಪ್ರಸ್ತುತ ಇಂಧನ ವೆಚ್ಚ , ಕಾರ್ಮಿಕರ ಕೂಲಿ ವೆಚ್ಚ ಮತ್ತು ಇತರ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ ನ್ಯೂ ಹಾಲೆಂಡ್, ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರ 3350 ರೂ. ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ 2700 ರೂ. ಪರಿಷ್ಕರಿಸಿ ಬಾಡಿಗೆ ನಿಗದಿಪಡಿಸಲಾಗಿದೆ.
ಈ ದರಗಳನ್ನು ಮೀರದಂತೆ ಬಾಡಿಗೆಯನ್ನು ಸಂಗ್ರಹಿಸಬೇಕು. ತಪ್ಪಿದರೆ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…