ದೊಡ್ಡಬಳ್ಳಾಪುರದಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿ ಆರಂಭವಾಗಿ ಕೆಲವೇ ದಿನಗಳಲ್ಲಿ ಹಲವು ಸಮಸ್ಯೆಗಳು ತಲೆದೋರಿದ್ದು, ರಾಗಿ ಖರೀದಿ ವೇಳೆ ಹಲವು ನಿಯಮಗಳಿಂದ ರೈತರು ಬೇಸತ್ತು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಪ್ರತಿವರ್ಷ ನಿಯಮಗಳು ಬದಲಾಗುತ್ತಿವೆ. ಇದರಿಂದ ರೈತರು ಹೈರಾಣಗಾಗಿದ್ದಾರೆ. ಸುಗಮ ಹಾದಿಯಲ್ಲಿ ರಾಗಿ ಖರೀದಿ ವ್ಯವಸ್ಥೆ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ರೆಕಮೆಂಡೇಷನ್ ಇದ್ರೆ ಬೇಗ ಕೆಲಸ ಆಗುತ್ತೆ. ಏನೂ ಇಲ್ದೆ ಸೀರಿಯಲ್ ಪ್ರಕಾರ ಬರೋರು ಗಂಟೆಗಟ್ಟಲೇ ಕಾದರೂ ಏನೂ ಆಗಲ್ಲ. ಇದ್ದ ಜಾಗದಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘ ಮುಖಂಡ ಬಚ್ಚೇಗೌಡ ಮಾತನಾಡಿ, ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಹೊಸ ನಿಯಮಗಳಿಂದ ರೈತರು ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಟ್ರ್ಯಾಕ್ಟರ್ ಬಾಡಿಗೆ ದಿನಕ್ಕೆ ಎರಡರಿಂದ ಮೂರು ಸಾವಿರವಿದೆ. ಎರಡು ಮೂರು ದಿನ ಕಾಯುವುದರಿಂದ 10 ರಿಂದ 15 ಸಾವಿರ ಟ್ರ್ಯಾಕ್ಟರ್ ಬಾಡಿಗೆಗೆ ಹಣ ಹೋಗುತ್ತದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಕೊಡುವ ಹಣ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ಕಿಡಿಕಾರಿದರು.
ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಪಬ್ಲಿಕ್ ಮಿರ್ಚಿ ಜೊತೆಗೆ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ರಾಗಿ ಖರೀದಿ ಅಧಿಕಾರಿ ಹೆಚ್.ಎನ್.ನಾರಾಯಣ್, ಎರಡು ಬಾರಿ ಬಯೋಮೆಟ್ರಿಕ್ ತೆಗೆದುಕೊಳ್ಳುವುದು ಸರ್ಕಾರ ಜಾರಿಗೆ ತಂದಿರುವ ನಿಯಮ. ರೈತರು ನಿಯಮ ಪಾಲನೆ ಮಾಡಬೇಕಾಗಿದೆ. ಇನ್ನೂ ರಾಗಿ ಖರೀದಿ ಪ್ರಕ್ರಿಯೆ ತಡವಾಗಲು ಕಾರಣ, ರಾಗಿ ಸಂಗ್ರಹಿಸುವ ಗೋದಾಮುಗಳಲ್ಲಿ ಈ ಬಾರಿ ಯಂತ್ರಗಳಿಂದ ಚೀಲ ಹೊಲೆಯಲಾಗುತ್ತಿದೆ. ವಿದ್ಯುತ್ ಸಮಸ್ಯೆ. ಕಾರ್ಮಿಕರ ಕೊರತೆಯಿಂದ ಸಮಸ್ಯೆಗಾಗಿದೆ. ಎರಡು ದಿನ ರಜೆ ಇದೆ. ಈ ಎರಡು ದಿನಗಳಲ್ಲಿ ಸಮಸ್ಯೆಗಳು ಬಗೆಹರಿಯಲಿದ್ದು, ಸೋಮವಾರದಿಂದ ರಾಗಿ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…