ಸರ್ಕಾರದ ಆದೇಶದನ್ವಯ 2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿಯನ್ನು ದಿನಾಂಕ 2023ರ ಡಿಸೆಂಬರ್ 01 ರಿಂದ ಆರಂಭಿಸಲಾಗುವುದೆಂದು ತಿಳಿಸಲಾಗಿತ್ತು.
ಸರ್ಕಾರವು ಇದೇ ಮೊದಲ ಬಾರಿಗೆ ರೈತರಿಂದ ಬೆರಳಚ್ಚು ಪಡೆದು ನೋಂದಣಿ ಮಾಡಿಕೊಳ್ಳಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಇದರ ಪರಿಶೀಲನೆಯು ಅಂತಿಮ ಹಂತದಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ತಂತ್ರಾಂಶವು ಮುಂದಿನ ಎರಡು ಮೂರು ದಿನಗಳಲ್ಲಿ ಕಾರ್ಯನಿರ್ವಹಿಸಲು ಲಭ್ಯವಾಗಲಿದ್ದು, ಶೀಘ್ರದಲ್ಲಿಯೇ ರೈತರ ನೋಂದಣಿಯನ್ನು ಆರಂಭಿಸಲಾಗುವುದು. ಹೀಗಾಗಿ ರೈತರು ಸಹಕರಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.