ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಭಸ್ಮವಾದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕಾಡತಿಪ್ಪೂರು ಗ್ರಾಮದಲ್ಲಿಂದು ನಡೆದಿದೆ.
ಗ್ರಾಮದ ವೆಂಕಟಪ್ಪ ಎಂಬುವರಿಗೆ ಸೇರಿದ ರಾಗಿ ಬಣವೆಗೆ ಇಂದು ಮಧ್ಯಾಹ್ನ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಅಂದಾಜು 1 ಲಕ್ಷ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿಯಾಗಿದೆ. ಕೂಡಲೇ ರೈತ ವೆಂಕಟಪ್ಪ ಹಾಗೂ ಸ್ಥಳೀಯರು ಪಕ್ಕದಲ್ಲೇ ಇದ್ದ ಹೊಂಡದಿಂದ ನೀರು ತಂದು ಸುರಿದು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ, ಬೆಂಕಿಯ ಕೆನ್ನಾಲಿಗೆ ನಿಮಿಷಗಳಲ್ಲೇ ಬಣವೆಯನ್ನು ಭಸ್ಮ ಮಾಡಿತು.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರಾಗಿ ಹುಲ್ಲು ಸಂಪೂರ್ಣ ಭಸ್ಮವಾಗಿದೆ. ಜಾನುವಾರುಗಳಿಗೆ ಮೇವಿಲ್ಲದೇ ರೈತ ವೆಂಕಟಪ್ಪ ಪರದಾಡುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…