ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂಪಾಯಿ‌ ಮೌಲ್ಯದ ಮೇವು ಭಸ್ಮ

ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು‌ ಲಕ್ಷಾಂತರ ರೂಪಾಯಿ‌ ಮೌಲ್ಯದ ಮೇವು ಭಸ್ಮವಾದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕಾಡತಿಪ್ಪೂರು ಗ್ರಾಮದಲ್ಲಿಂದು ನಡೆದಿದೆ.

ಗ್ರಾಮದ ವೆಂಕಟಪ್ಪ ಎಂಬುವರಿಗೆ ಸೇರಿದ ರಾಗಿ ಬಣವೆಗೆ ಇಂದು ಮಧ್ಯಾಹ್ನ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಅಂದಾಜು 1 ಲಕ್ಷ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿಯಾಗಿದೆ. ಕೂಡಲೇ ರೈತ ವೆಂಕಟಪ್ಪ ಹಾಗೂ ಸ್ಥಳೀಯರು ಪಕ್ಕದಲ್ಲೇ ಇದ್ದ ಹೊಂಡದಿಂದ ನೀರು ತಂದು ಸುರಿದು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ, ಬೆಂಕಿಯ ಕೆನ್ನಾಲಿಗೆ ನಿಮಿಷಗಳಲ್ಲೇ ಬಣವೆಯನ್ನು ಭಸ್ಮ ಮಾಡಿತು.

ಅಗ್ನಿಶಾಮಕ‌ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರಾಗಿ ಹುಲ್ಲು ಸಂಪೂರ್ಣ ಭಸ್ಮವಾಗಿದೆ. ಜಾನುವಾರುಗಳಿಗೆ ಮೇವಿಲ್ಲದೇ ರೈತ ವೆಂಕಟಪ್ಪ ಪರದಾಡುತ್ತಿದ್ದಾರೆ.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

2 hours ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

11 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

1 day ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

1 day ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago