ರಾಗಿ ಹುಲ್ಲಿನ ಬಣವೆಗೆ ಬೆಂಕಿ: ಸುಟ್ಟು ಕರಕಲಾದ ಸುಮಾರು 90‌ ಸಾವಿರ ಮೌಲ್ಯದ ಬಣವೆ

ರಾಗಿ ಹುಲ್ಲಿನ‌ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಸುಮಾರು 90‌ ಸಾವಿರ ಮೌಲ್ಯದ ಬಣವೆ ಸುಟ್ಟುಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕಮುದ್ದೇನಹಳ್ಳಿ‌ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮುದ್ದೇನಹಳ್ಳಿ ಗ್ರಾಮದ ಅಮಲನಾರಾಯಣ ಎಂಬುವವರ ತೋಟದಲ್ಲಿ ರಾಗಿ ಹುಲ್ಲಿನ ಬಣವೆ ಹಾಕಲಾಗಿತ್ತು. ಯಾರೋ ಬೇಕಂತಲೇ ಬಣವೆಗೆ ಬೆಂಕಿ ಇಡಲಾಗಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಸದ್ಯ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದ್ದು, ಬರಗಾಲದಲ್ಲಿ ಮೇವು ಸಿಗುವುದು‌ ಕಷ್ಟ. ಇಂತಹ ಪರಿಸ್ಥಿಯಲ್ಲೂ ಹುಲ್ಲನ್ನು ಶೇಖರಣೆ ಮಾಡಲಾಗಿತ್ತು. ಆದರೆ ಕಿಡಿಗೇಡಿಗಳ ಕೃತ್ಯಕ್ಕೆ ಹಸುಗಳು ಉಪವಾಸ ಮಲಗುವಂತಾಗಿದೆ ಎಂದು ರೈತ ಅಮಲನಾರಾಯಣ ಅವರು ತಮ್ಮ ಅಳಲನ್ನತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

4 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

5 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

13 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

18 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago