ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ರಾಜಕಲ್ಲಹಳ್ಳಿ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಮೂರು ಲಕ್ಷಗಳ ದೇಣಿಗೆ ನೀಡಿದರು.
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗ್ರಾಮದ ಹಿರಿಯ ಮುಖಂಡ ವೆಂಕಟರಾಮೇಗೌಡ, ಗ್ರಾಮ ಪಂಚಾಯತಿ ಸದಸ್ಯ ಸತ್ಯನಾರಾಯಣ್, ಎಂಪಿಸಿಎಸ್ ಅಧ್ಯಕ್ಷ ಮುನಿರಾಜು ಮುಖಂಡರಾದ ನಾರಾಯಣಸ್ವಾಮಿ, ಕುಪ್ಪಣ್ಣ ಮುಂತಾದವರು ಇದ್ದರು