Categories: ಕೋಲಾರ

ರಾಜಕಲ್ಲಹಳ್ಳಿ ಶಾಲೆಯ ಶತಮಾನೋತ್ಸವ ಸಂಭ್ರಮ

ಕೋಲಾರ: ರಾಜಕಲ್ಲಹಳ್ಳಿ ಶಾಲೆಯ ಶತಮಾನೋತ್ಸವದ ಹಿನ್ನೆಲೆಯಲ್ಲಿ ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಯ ರೀತಿಯಲ್ಲಿ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ತಾಲೂಕಿನ ವೇಮಗಲ್ ಹೋಬಳಿಯ ರಾಜಕಲ್ಲಹಳ್ಳಿ ಸರ್ಕಾರಿ ಶಾಲೆಯ ಶತಮಾನೋತ್ಸವ ಅಂಗವಾಗಿ ಸೋಮವಾರ ಶಾಲೆಯ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಂದ ನಡೆದ ಶತಮಾನೋತ್ಸವ ಸಂಭ್ರಮ, ಗುರುವಂದನಾ ಹಾಗೂ ರಂಗಮಂಟಪ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ಶಾಲೆ ನೂರು ವರ್ಷಗಳು ಪೂರೈಸುವ ಸಂದರ್ಭದ ಹಿಂದೆ ಬಹಳಷ್ಟು ಶ್ರಮ ಇರುತ್ತದೆ. ಇಲ್ಲಿಂದಲೇ ಸಾವಿರಾರು ವಿದ್ಯಾರ್ಥಿಗಳಿಗೆ ಜೀವನವನ್ನು ಕಟ್ಟಿಕೊಟ್ಟಿದ್ದಾರೆ‌. ಇಂತಹ ಗ್ರಾಮವನ್ನು ಮಾದರಿ ಮಾಡಲು ಮುಂದಿನ ಹದಿನೈದು ದಿನಗಳಲ್ಲಿ ಗ್ರಾಮದಲ್ಲಿಯೇ ಸಭೆ ಮಾಡಿ ಸಮಸ್ಯೆಗಳ ಜೊತೆಗೆ ಕಾಮಗಾರಿಗಳನ್ನು ಪಟ್ಟಿ ಮಾಡಿ ಅಭಿವೃದ್ಧಿ ಮಾಡಲಾಗುತ್ತದೆ ಎಂದರು.

ಪ್ರತಿಯೊಂದು ಗ್ರಾಮದಲ್ಲಿಯೂ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿದಾಗ ಮಾತ್ರವೇ ಅ ಗ್ರಾಮದಲ್ಲಿ ಎಲ್ಲಾ ಹಂತದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ. ರಾಜ್ಯ ಸರಕಾರದಲ್ಲಿ ಅಭಿವೃದ್ಧಿಗೆ ಹಣದ ಕೊರತೆಯಿಲ್ಲ. ಈಗಾಗಲೇ ಸಿದ್ದರಾಮಯ್ಯ ಅವರು 100 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಶಿಕ್ಷಣ, ಆರೋಗ್ಯ, ಉದ್ಯೋಗ, ಮತ್ತು ಕೃಷಿಗೆ ಅದ್ಯತೆ ನೀಡುವ ಸಂದರ್ಭದಲ್ಲಿ ನಾನು ಯಾವಾಗಲೂ ಮುಂದೆ ಇರುತ್ತೇನೆ. ಸರಕಾರವು ಕೂಡ ಗ್ರಾಮದ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರೂರು ಶೈಲೇಶ್ವರ ಗಾಣಿಗರ ಸಂಸ್ಥಾನ ಮಠದ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಮಾತನಾಡಿ, ಸಾವಿರಾರು ಕುಟುಂಬಗಳಿಗೆ ಬೆಳಕು ತರುವ ನಿಟ್ಟಿನಲ್ಲಿ ರಾಜಕಲ್ಲಹಳ್ಳಿ ಶಾಲೆಯು ನಡೆದುಕೊಂಡು ಬಂದಿದೆ ಅದೇ ರೀತಿಯಲ್ಲಿ ನಾವು ಓದಿದ ಶಾಲೆಯನ್ನು ಮರೆಯಬಾರದು ಎಂದು ಹಳೆಯ ವಿದ್ಯಾರ್ಥಿಗಳು ಅಭಿವೃದ್ಧಿ ಮಾಡಲು ಮುಂದೆ ಬಂದಿದ್ದಾರೆ. ಇಂತಹ ಒಳ್ಳೆಯ ಕೆಲಸಗಳು ಮುಂದಿನ ಮನುಷ್ಯ ಜನ್ಮಕ್ಕೆ ಸಹಕಾರಿಯಾಗುತ್ತದೆ ಮನುಷ್ಯನಿಗೆ ಬದುಕು ಕೊಟ್ಟು ಸ್ಥಳವನ್ನು ಮರೆಯಬಾರದು ಆವಾಗ ಮಾತ್ರವೇ ಅವನ ಬದುಕಿಗೆ ಒಂದು ಅರ್ಥ ಬರುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಸರಕಾರಿ ಶಾಲೆಗಳನ್ನು ಗುರುತಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದೇ ಆದಲ್ಲಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ ಈಗಾಗಲೇ ಕೋಲಾರ ನಗರದ ಪೇಟೆಚಾಮನಹಳ್ಳಿ ಶಾಲೆಯ ಶತಮಾನೋತ್ಸವ ಅಂಗವಾಗಿ ಸುಮಾರು 30 ಲಕ್ಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಾ ಇದೆ. ಈ ಶಾಲೆಗೂ ಶೌಚಾಲಯಗಳನ್ನು ದುರಸ್ತಿ ಮಾಡಲು ಅನುದಾನ ಕೇಳಿದ್ದು, ಕೂಡಲೇ ಕೆಲಸ ಪ್ರಾರಂಭ ಮಾಡಿ ಹಣ ಬಿಡುಗಡೆ ಮಾಡಲು ಸಿದ್ಧ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಇವತ್ತು ಖಾಸಗಿ ಶಾಲೆಗಳ ಮೇಲೆ ಪೋಷಕರಿಗೆ ವ್ಯಾಮೋಹ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಸರಕಾರವು ನೂರು ವರ್ಷಗಳು ಪೂರೈಸಿದ ಶಾಲೆಗಳನ್ನು ಪಟ್ಟಿ ಮಾಡಿ ಅಭಿವೃದ್ಧಿ ಮಾಡಬೇಕು ಇಲ್ಲದೇ ಹೋದರೆ ಮುಂದೆ ಸರ್ಕಾರಿ ಶಾಲೆಗಳನ್ನು ಉಳಿಸುಕೊಳ್ಳುವುದು ಕಷ್ಟವಾಗುತ್ತದೆ. ಜೊತೆಗೆ ಸಂವಿಧಾನವು ನಮಗೆಲ್ಲ ಹಕ್ಕು ಮತ್ತು ಜವಾಬ್ದಾರಿಗಳನ್ನು ಕೊಟ್ಟಿದೆ ಅವುಗಳನ್ನು ಜಾರಿ ಮಾಡಬೇಕು ಸಂವಿಧಾನದ ಬಗ್ಗೆ ಶಾಲಾ ಹಂತದಲ್ಲಿ ಮಕ್ಕಳಿಗೆ ಮನವರಿಕೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಶಿಕ್ಷಣದ ಶಕ್ತಿಯೇ ಮನುಷ್ಯನ ಮುಂದಿನ ಜೀವನವಾಗಿದೆ ಶಿಕ್ಷಣಕ್ಕೆ ಯಾವುದೇ ಜಾತಿ, ಧರ್ಮ, ಆಸ್ತಿ, ಅಂತಸ್ಥು ಇಲ್ಲ. ಮಕ್ಕಳು ಗುಣಾತ್ಮಕ ಮತ್ತು ಮೌಲ್ಯಯುತ ಶಿಕ್ಷಣವನ್ನು ಪಡೆಯಲು ಸರ್ಕಾರಿ ಶಾಲೆಗಳಿಂದ ಮಾತ್ರ ಸಾಧ್ಯ. ನಾವು ಓದಿದ ಶಾಲೆಗೆ ಏನಾದರೂ ಕೊಡುಗೆಯನ್ನು ನೀಡಬೇಕು ಎಂಬುದನ್ನು ಈ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿ. ಇದೇ ರೀತಿ ಪ್ರತಿಯೊಂದು ಶಾಲೆಯ ಹಳೆ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಮದ ಅಪ್ಪಯ್ಯಣ್ಣ ಮತ್ತು ಮಂಜುನಾಥ್ ಅವರ ಕುಟುಂಬದವರು ಶಾಲೆಗೆ ರಂಗಮಂಟಪವನ್ನು ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ನಾಗಲಾಪುರ ಮಠದ ಶ್ರೀ ತೇಜೇಶ ಲಿಂಗ ಶುವಾಚಾರ್ಯಸ್ವಾಮಿಗಳು, ಶಿವನಾಪುರದ ಶ್ರೀ ಪ್ರಣವಾನಂದಪುರಿ ಸ್ವಾಮಿಗಳು, ಬಿಇಒ ಕನ್ನಯ್ಯ, ತಾಪಂ ಇಒ ಮುನಿಯಪ್ಪ, ಟಿಎಪಿಸಿಎಂಎಸ್ ನಿರ್ದೇಶಕ ನಾಗನಾಳ ಸೋಮಣ್ಣ, ವೇಮಗಲ್ ಸೊಸೈಟಿ ಅಧ್ಯಕ್ಷ ನಂಜುಂಡಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಜುಮಾರ್, ವೆಂಕಟರಾಮೇಗೌಡ, ಬಿಬಿಎಂಪಿ ಶ್ರೀನಿವಾಸ್, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಕುಪ್ಪಣ್ಣ, ವೆಂಕಟೇಶಪ್ಪ, ಎ. ಶ್ರೀನಿವಾಸ್, ಮಹೇಶ್, ಎಂ.ರವೀಂದ್ರ, ಮುತ್ತಣ್ಣ, ಲೋಕೇಶ್, ಸುರೇಶ್, ಕೆ.ಎಸ್.ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

1 hour ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

2 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

14 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

14 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

16 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

1 day ago