ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈಜೋಡಿಸಿ ಜನಸಾಮಾನ್ಯರಿಗೆ ತೊಂದರೆ- ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಕಿಡಿ

ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ‌ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ.‌ ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ.‌ ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ‌ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ‌ ಎಂದು ಹೇಳಿದರು.

ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ‌ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತೇವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ‌. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ‌ ಉಪಾಧ್ಯಕ್ಷ ದೊಡ್ಡಯ್ಯ,‌ ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ,‌‌ ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ‌, ಗಂಗಧಾರಪ್ಪ, ಮಹಿಳಾ‌ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

5 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

7 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

14 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago