Categories: ಕೋಲಾರ

ರಾಜಕಾರಣ ದಂಧೆಯಾಗಿದೆ: ಹಣ ಹೆಂಡ ಇಲ್ಲದ ರಾಜಕಾರಣ ಬರಬೇಕಾಗಿದೆ- ಮಹಿಮಾ ಜೆ ಪಟೇಲ್

ಕೋಲಾರ: ಇವತ್ತಿನ ಚುನಾವಣೆ ಎಂಬುದು ಈಗ ದಂಧೆಯಾಗಿ ಮಾರ್ಪಟ್ಟಿದೆ. ದುಡ್ಡಿಲ್ಲದೆ ರಾಜಕಾರಣ ಇಲ್ಲ ಎಂಬಂಥ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ದುಡ್ಡು ಹಾಕಿ ದುಡ್ಡು ತೆಗೆಯುವ ಕೆಲಸವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ‌ ಕಲ್ಲಂಡೂರು ಗ್ರಾಮದಲ್ಲಿರುವ ಡಾ.ನಾಗರಾಜ್ ಅವರ ನಿವಾಸದಲ್ಲಿ ಭಾನುವಾರ ಡಾ.ನಾಗರಾಜ್ ಗೆಳೆಯರ ಬಳಗ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣ ಎಂದರೆ ಬರೀ ಚುನಾವಣೆ ಅಲ್ಲ. ಉತ್ತಮ ಆಡಳಿತ ಬರಬೇಕು. ಹಣ, ಹೆಂಡ ಇಲ್ಲದೆ ಚುನಾವಣೆ ಗೆಲ್ಲಬಹುದು ಎಂಬ ಸಾಧ್ಯತೆ ಇದೆ ಎಂಬುದನ್ನು ತೋರಿಸಬೇಕು ಎಂದರು.

ದೇಶದಲ್ಲಿ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನವನ್ನು ಅನುಭವಿಸುತ್ತಿದ್ದೇವೆ. ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ. ಗ್ಲೋಬಲ್ ವಾರ್ಮಿಂಗ್ ( ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್‌ (ಜಾಗತಿಕ ಸುಡುವಿಕೆ) ಆಗಿದೆ. ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ ಎಂದು ಎಚ್ಚರಿಸಿದರು.

ವಿಕಾಸ ಕ್ರಾಂತಿ ಮಾಡಬೇಕು ಸಂಪೂರ್ಣ ಸಾವಯವ ರಾಜ್ಯ ಆಗಬೇಕು. ಆಡಳಿತ, ಶಿಕ್ಷಣ, ಕೃಷಿ ಆರೋಗ್ಯ, ಪರಿಸರ ಕ್ಷೇತ್ರದಲ್ಲಿ ಹೊಸ ಚಳವಳಿ ಆರಂಭಿಸಬೇಕು. ರಾಜ್ಯದಲ್ಲಿ ಮೂರು ಸಾವಿರ ಮಠಗಳಿವೆ. ಅವರು ನಮ್ಮ ಜೊತೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮಾರ್ಚ್ 24ಕ್ಕೆ ಕೊಟ್ಟೂರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದು, ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ‌. ರಾಜ್ಯದಲ್ಲಿ ಸೂಕ್ಷ್ಮತೆ ಉಳಿಸಿಕೊಂಡ ಶಾಸಕರು ಇದ್ದು, ಅವರ ಸಮ್ಮುಖದಲ್ಲಿ ಏಪ್ರಿಲ್ 3, 4ರಂದು ಸಾಣೇಹಳ್ಳಿಯಲ್ಲಿ ಪಕ್ಷಾತೀತವಾಗಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಹಮ್ಮಿಕೊಳ್ಳಲಾಗಿದೆ ಎಂದರು.

ಮುಂಬರಲಿರುವ 2025 ರ ಅಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ನಾಗರಾಜ್ ಅವರಂಥವರನ್ನು ಮಾಡಲಾಗಿದೆ ಅವರನ್ನು ಗೆಲ್ಲಿಸಬೇಕು‌ ಇದಕ್ಕೆ ಸಮಾನ ಮನಸ್ಕ ಗೆಳೆಯರು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ, ಜೆಡಿಯು ಪಕ್ಷದಿಂದ
ವಿಧಾನ ಪರಿಷತ್ ಹೋಗಲು ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಿ ಅವಕಾಶ ‌ಮಾಡಿಕೊಟ್ಡಿದ್ದಾರೆ. ಹಣ ಇಲ್ಲದ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಿಕೊಡುತ್ತೇವೆ. ಹಣ ಖರ್ಚು ಮಾಡದೆ ಎದುರಿಸಿದಾಗ ಯಾವುದೇ ಭಯ ಇರುವುದಿಲ್ಲ. ಪಾರದರ್ಶಕ ರಾಜಕಾರಣ‌ಕ್ಕೆ ಒತ್ತು ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಬಲ ನಾರಾಯಣಪ್ಪ, ದಕ್ಷಿಣ ಭಾರತ ಕುಂಬಾರ ಕುಲಾಲ್ ಫೆಡರೇಶನ್ ಅಧ್ಯಕ್ಷ ಶಿವಕುಮಾರ್ ಚೌಡಶೆಟ್ಟಿ, ಕಸ್ತೂರಿ ಜನಪರ ವೇದಿಕೆ ರಾಜ್ಯ ಅಧ್ಯಕ್ಷ ನಿಲೇಶ್ ಗೌಡ, ಕಸಾಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜು, ಮಾಜಿ ಗೌರವ ಕಾರ್ಯದರ್ಶಿ ರತ್ನಪ್ಪ, ಸಿನಿಮಾ ನಟ ವಿಧ್ಯಾಬಾರಣ್, ಹೈಕೋರ್ಟ್ ವಕೀಲ ನಟರಾಜ್, ಲಕ್ಷ್ಮೀ ಗ್ರೂಪ್‌ ಆಫ್ ಹಾಸ್ಪಿಟಲ್ ಮುಖ್ಯಸ್ಥ ಡಾ.ಸಾಂಭಶಿವ, ಬಿಜೆಪಿ ಮುಖಂಡ ಪ್ರಕಾಶ್ ಮುಖಂಡರಾದ ಲಕನ್, ಗಂಗಾರಾಜು, ರಂಗನಾಥ್ ಮುಂತಾದವರು ಇದ್ದರು

 

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

14 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

19 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

19 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

24 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago