ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇದರ ಜೊತೆಗೆ ಮಾನ್ಯ ಸುಪ್ರೀಂ ಕೋರ್ಟ್‌ನ ಆದೇಶದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್‌ಗಳನ್ನು ಅಮಾನತು ಮಾಡಬೇಕು ಎಂದು ಸೂಚಿಸಿದರು.
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ಎಕ್ಸ್‌ಪ್ಲೋಸಿವ್ ಆಕ್ಟ್ ನಲ್ಲಿ ಲೈಸೆನ್ಸ್ ಕೊಡುವಾಗ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವ ಕಳೆದುಕೊಂಡಿದ್ದಕ್ಕೆ ಯಾರು ಹೊಣೆಗಾರರು? ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಿಳಿಸಿದರು.
ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ರಾಜ್ಯಕ್ಕೆ ಅನ್ವಯಿಸುವಂತೆ ನಿಯಮ ಬದಲಾವಣೆ ಆಗಬೇಕು. ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್ ಇನ್ಸ್‌ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದರು.
ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಿ ಎಂದು ತಿಳಿಸಿದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…