ರಾಜಕೀಯ ಕಾರ್ಯಕ್ರಮ, ಸಾರ್ವಜನಿಕ ಮೆರವಣಿಗೆ, ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧ- ಸಿಎಂ‌ ಸಿದ್ದರಾಮಯ್ಯ

ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇದರ ಜೊತೆಗೆ ಮಾನ್ಯ ಸುಪ್ರೀಂ ಕೋರ್ಟ್‌ನ ಆದೇಶದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಿರಿಯ ಅಧಿಕಾರಿಗೊಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್‌ಗಳನ್ನು ಅಮಾನತು ಮಾಡಬೇಕು ಎಂದು ಸೂಚಿಸಿದರು.

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ಎಕ್ಸ್‌ಪ್ಲೋಸಿವ್‌ ಆಕ್ಟ್‌ ನಲ್ಲಿ ಲೈಸೆನ್ಸ್‌ ಕೊಡುವಾಗ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವ ಕಳೆದುಕೊಂಡಿದ್ದಕ್ಕೆ ಯಾರು ಹೊಣೆಗಾರರು? ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು‌ ತಿಳಿಸಿದರು.

ಎಲ್ಲ ಪಟಾಕಿ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಬೇಕು. ಇನ್ನು ಮುಂದೆ ಲೈಸನ್ಸ್‌ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದರು.

ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್‌ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್‌, ಅಗ್ನಿಶಾಮಕ, ಟ್ರಾಫಿಕ್‌ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್‌ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ರಾಜ್ಯಕ್ಕೆ ಅನ್ವಯಿಸುವಂತೆ ನಿಯಮ ಬದಲಾವಣೆ ಆಗಬೇಕು. ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್‌ ಇನ್ಸ್‌ಪೆಕ್ಟರ್‌, ತಹಸೀಲ್ದಾರ್‌, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದರು.

ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಿ ಎಂದು ತಿಳಿಸಿದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 hour ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago