ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಮಂಗಳವಾರ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ ಎಂದರು.
ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದರು.
ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…