ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ನಿರ್ಜನ ಪ್ರದೇಶದಲ್ಲಿರುವ ರೈಲ್ವೆ ಹಳಿಗಳ ಮೇಲೆ ಕಳೆದ ಎರಡು ತಿಂಗಳಿಂದ ಈ ಬೋಗಿಗಳನ್ನು ನಿಲ್ಲಿಸಲಾಗಿತ್ತು. ರೈಲ್ವೆ ಇಲಾಖೆಯ ಅಣಕು ಕಾರ್ಯಾಚರಣೆ (ಮಾಕ್ ಡ್ರಿಲ್) ಉದ್ದೇಶಕ್ಕಾಗಿ ಬಳಸಲಾಗುತ್ತಿದ್ದ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಸಮಯದಲ್ಲಿ ಎರಡೂ ಬೋಗಿಗಳು ಬೆಂಕಿಗೆ ಆಹುತಿಯಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…
ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ…
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ…