ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದು ರಾಜಕೀಯ ಚಳವಳಿ ಅಲ್ಲ

ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು.

100 ರೂ. ಗಳಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ.

ಇದು ಐತಿಹಾಸಿಕವಾದ ಪ್ರತಿಭಟನೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ  14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರೂ. ರಾಜ್ಯಕ್ಕೆ ಬರುತ್ತಿತ್ತು.  ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ. ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉತ್ತರಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಕೇಂದ್ರ ನೀಡುತ್ತಿದೆ. ಅಂತೆಯೇ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಗಳಿಗೂ ನೀಡಲಾಗುತ್ತಿದೆ. ಈ ಯಾವ ರಾಜ್ಯಗಳೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಂಡಿಲ್ಲ.  ಜನಸಂಖ್ಯೆ, ತಲಾ ಆದಾಯ, ಸಮುದಾಯಗಳ ಅಭಿವೃದ್ಧಿ ಸೇರಿದಂತೆ ಹಲವು ಮಾನದಂಡಗಳಿಂದ ಅನುದಾನ ಹಂಚಿಕೆಯನ್ನು ನಿರ್ಧರಿಸಲಾಗುತ್ತದೆ. 15 ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿಯನ್ನು ಪರಿಗಣಿಸುತ್ತಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago