ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಕ್ಯಾನ್ಸರ್ ಹಿನ್ನೆಲೆ ನಟ ಶಿವರಾಜ್ಕುಮಾರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿಕೊಂಡು ಇಂದು(ಭಾನುವಾರ) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.
ಶಿವಣ್ಣ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಅಮೇರಿಕಾದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಒಂದು ತಿಂಗಳ ನಂತರ ಶಿವಣ್ಣ ರಾಜ್ಯಕ್ಕೆ ಆಗಮಿಸಿದ್ದಾರೆ.
ಡಿ.18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಇಂದು ಬೆಂಗಳೂರಿಗೆ ಮರಳಿದ್ದಾರೆ.
ಶಿವಣ್ಣ ಅವರ ಆಗಮನಕ್ಕೆ ಅಭಿಮಾನಿಗಳು ಭರ್ಜರಿ ತಯಾರಿಯನ್ನ ಮಾಡಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣ ರಸ್ತೆಗಳು, ಶಿವಣ್ಣನ ಮನೆ ಸಮೀಪದಲ್ಲಿ “ಕಿಂಗ್ ಈಸ್ ಬ್ಯಾಕ್” ಎಂಬ ಬರಹದ ಕೌಟೌಟ್ಗಳು ರಾರಾಜಿಸುತ್ತಿವೆ. ಕಟೌಟ್ಗಳಲ್ಲಿ ಶಿವರಾಜ್ ಕುಮಾರ್ ಜತೆ ಗೀತಾ ಶಿವರಾಜ್ ಕುಮಾರ್ ಫೋಟೋ ಕೂಡ ರಾರಾಜಿಸುತ್ತಿದೆ.