ರಾಜ್ಯಕ್ಕೆ ಶಿವಣ್ಣ ಆಗಮನ: ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದ ಶಿವಣ್ಣ: ಒಂದು ತಿಂಗಳ ನಂತರ ರಾಜ್ಯಕ್ಕೆ ಆಗಮಿಸಿದ ಶಿವಣ್ಣ: ನೆಚ್ಚಿನ ನಟನನ್ನ ಸ್ವಾಗತಿಸಲು ಅಭಿಮಾನಿಗಳ ಸಜ್ಜು

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್‌ ಕುಮಾರ್‌ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಕ್ಯಾನ್ಸರ್ ಹಿನ್ನೆಲೆ ನಟ ಶಿವರಾಜ್‌ಕುಮಾ‌ರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸ‌ರ್ ಚಿಕಿತ್ಸೆ ಮುಗಿಸಿಕೊಂಡು ಇಂದು(ಭಾನುವಾರ) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.

ಶಿವಣ್ಣ ಹಾಗೂ ಗೀತಾ ಶಿವರಾಜ್‌ ಕುಮಾರ್‌ ಅವರು ಅಮೇರಿಕಾದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಒಂದು ತಿಂಗಳ ನಂತರ ಶಿವಣ್ಣ ರಾಜ್ಯಕ್ಕೆ ಆಗಮಿಸಿದ್ದಾರೆ.

ಡಿ.18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್‌ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಇಂದು ಬೆಂಗಳೂರಿಗೆ ಮರಳಿದ್ದಾರೆ.

ಶಿವಣ್ಣ ಅವರ ಆಗಮನಕ್ಕೆ ಅಭಿಮಾನಿಗಳು ಭರ್ಜರಿ ತಯಾರಿಯನ್ನ ಮಾಡಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣ ರಸ್ತೆಗಳು, ಶಿವಣ್ಣನ ಮನೆ ಸಮೀಪದಲ್ಲಿ “ಕಿಂಗ್‌ ಈಸ್‌ ಬ್ಯಾಕ್‌” ಎಂಬ ಬರಹದ ಕೌಟೌಟ್‌ಗಳು ರಾರಾಜಿಸುತ್ತಿವೆ. ಕಟೌಟ್‌ಗಳಲ್ಲಿ ಶಿವರಾಜ್‌ ಕುಮಾರ್‌ ಜತೆ ಗೀತಾ ಶಿವರಾಜ್‌ ಕುಮಾರ್‌ ಫೋಟೋ ಕೂಡ ರಾರಾಜಿಸುತ್ತಿದೆ.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

42 minutes ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

3 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

5 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

10 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago