ಕಲಾಪದಲ್ಲಿ ಕಾಂಗ್ರೆಸ್ ಎಂ ಎಲ್ ಸಿ ಓರ್ವ ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಕೇಳ್ತಾರೆ. ಏಕೆ ಕೇಳುತ್ತಾರೆ ಎಂದರೆ ಈಗ ಇರುವುದು ಸಿದ್ರಾಮುಲ್ಲಾಖಾನ್ ಸರ್ಕಾರ. ಕಾಂಗ್ರೆಸ್ ಸರ್ಕಾರದ ನೀತಿಯೇ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಬಳಿಯುವುದು ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ನಡೆಸಿದರು.
ನಗರದ ಡಿಪಿವಿ ಕಲ್ಯಾಣ ಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಈ ಹಿಂದೆ ನಮ್ಮ ಪರಮೋಚ್ಛ ನಾಯಕ ಅಟಲ್ ಬಿಹಾರಿ ವಾಜಪೇಯಿ ಅಂತವರೆ ಸೋತಿದ್ದರು. 2023ರ ವಿಧಾನಸಭಾ ಚುನಾವಣಾ ಸೋಲಿನಿಂದ ನಾವು ಎದೆಗುಂದ ಬೇಕಿಲ್ಲ. ಯಾವುದೇ ಸರ್ಕಾರ ಬಂದರೂ ಕನಿಷ್ಠ ಆರು ತಿಂಗಳು ಸರಿಯಾಗಿರುತ್ತದೆ. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಎರಡೇ ತಿಂಗಳಲ್ಲಿ ದ್ವಂದ್ವ, ಮುಸಿಕಿನ ಗುದ್ದಾಟ ಆರಂಭವಾಗಿದೆ ಎಂದು ಹೇಳಿದರು.
ಲೋಕಸಭಾ ಚುನಾವಣೆ ದೇಶವನ್ನು ನಡೆಸುವ ಚುನಾವಣೆ
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕತೆ ಸುಧಾರಿಸಿದೆ. ಬಿಹಾರದ ಪಾಟ್ನಾದಲ್ಲಿ ನರಿಗಳೆಲ್ಲಾ ಒಂದೆಡೆ ಸೇರಿ ಮೋದಿಯನ್ನು ಸೋಲಿಸಲು ಒಂದಾಗಿದ್ದಾರೆ. ಮುಂದೆ ಬೆಂಗಳೂರಿನಲ್ಲಿಯೂ ನರಿಬುದ್ದಿಯವರೆಲ್ಲಾ ಸೇರಲು ನಿರ್ಧರಿಸಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಬೂತ್ ಮಟ್ಟದಲ್ಲಿ ಜಯಶೀಲರಾಗುವುದನ್ನು ರೂಢಿಸಿಕೊಳ್ಳಬೇಕು. ಬೂತ್ ಗೆದ್ದರೆ ಚುನಾವಣೆ ಗೆದ್ದಂತೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ ಕಾರ್ಯಕರ್ತರ ಶಕ್ತಿಯೇ ಬಿಜೆಪಿ ಶಕ್ತಿ, ಚುನಾವಣಾ ಸಂದರ್ಭದಲ್ಲಿ ಮಾತ್ರ ಜನ, ಕಾರ್ಯಕರ್ತರು, ಮುಖಂಡರ ಜೊತೆ ಇರದೇ ಚುನಾವಣೆ ನಂತರವೂ ಜೊತೆಗಿರುವ ಏಕೈಕ ಪಕ್ಷ ಬಿಜೆಪಿ ಎಂದರು.
ನಾವು ಪ್ರಸ್ತುತ ಸುವರ್ಣಘಳಿಗೆಯಲ್ಲಿದ್ದೇವೆ ಮುಂದಿನ ದಿನಗಳಲ್ಲಿ ಪ್ರತಿ ಗ್ರಾ.ಪಂ, ತಾ.ಪಂ, ಜಿ.ಪಂ ಚುನಾವಣೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನ ಗೆಲ್ಲಿಸಿ ದೇಶ ಉಳಿಸಬೇಕು. ಜಿಲ್ಲಾಡಳಿತ, ತಾಲೂಕಾಡಳಿತ, ವಿವಿಧ ಇಲಾಖೆಗಳಡಿಯಲ್ಲಿ ಬರುವ ಕೆಲಸ ಕಾರ್ಯ, ಯೋಜನೆಗಳ ಸೌಲಭ್ಯಗಳನ್ನು ಕಾರ್ಯಕರ್ತರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, 70 ವರ್ಷಗಳ ನಂತರ 140 ಕೋಟಿ ಜನಕ್ಕೆ ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ತಲುಪಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಆದ್ದರಿಂದ ಮತ್ತೊಮ್ಮೆ ಮೋದಿಯವರನ್ನು ಗೆಲ್ಲಿಸಿ ಪ್ರಧಾನಿಯನ್ನಾಗಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
View Comments
CT Ravi , 90 ravi, BJP Andre janagalu tinnodu manne